ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣೆ
ಬೆಳಗಾವಿ,29: ಸ್ಮಾಟರ್್ ಸಿಟಿ ಯೋಜನೆಯಡಿ 76.80 ಕೋಟಿ ರೂಪಾಯಿ ಯೋಜನಾ ಮೊತ್ತದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿ ಸ್ಥಾಪಿಸಲಾಗಿರುವ ರಾಜ್ಯದ ಮೊದಲ ಇಂಟಿಗ್ರೇಟೆಡ್ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್(ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ವನ್ನು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ (ಜ.29) ಲೋಕಾರ್ಪಣೆಗೊಳಿಸಿದರು.
ಸ್ಮಾಟರ್್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಸ್ಮಾಟರ್್ ಸಿಟಿ ಯೋಜನೆಯ ವ್ಯವಸ್ಥಾಪಕ ನಿದರ್ೇಶಕ ಶಶಿಧರ್ ಕುರೇರ್ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು.
ಅದೇ ರೀತಿ ಮಹಾನಗರ ಪಾಲಿಕೆಯ ಕಾಮಗಾರಿಗಳ ಕುರಿತು ಪಾಲಿಕೆ ಆಯುಕ್ತರಾದ ಜಗದೀಶ್ ವಿವರಿಸಿದರು.
ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಅಶೋಕ ನಗರದಲ್ಲಿರುವ ಈಜುಕೊಳ ಹಾಗೂ ವ್ಯಾಯಾಮಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ(ಕಚೇರಿ ಸಂಕೀರ್ಣ) ಮತ್ತು ಆಂಗ್ಲ ಮಾಧ್ಯಮ ಶಾಲೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಸಿಟಿಜನ್ ಆಪ್ ಬಿಡುಗಡೆ:
ಬೆಳಗಾವಿ ನಾಗರಿಕ ಸೇವಾ ಅಪ್ಲಿಕೇಷನ್ ಅನ್ನು ಮುಖ್ಯಮಂತ್ರಿಗಳು ಸಾರ್ವಜನಿಕ ಬಳಕೆಗೆ ಬಿಡುಗಡೆಗೊಳಿಸಿದರು. ಇದರಲ್ಲಿ ಸಾರ್ವಜನಿಕ ತಮ್ಮ ಅಹವಾಲುಗಳನ್ನು ಕೂಡ ಈ ಆಪ್ ಮೂಲಕ ಕಮಾಂಡ್ ಸೆಂಟರ್ಗೆ ಹಾಗೂ ಸಂಬಂಧಿಸಿದ ಇಲಾಖೆಗೆ ಸಲ್ಲಿಸಲು ಅವಕಾಶ
ಕಲ್ಪಿಸಲಾಗಿದೆ.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ತಿನ ಸಕರ್ಾರಿ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ದುಯರ್ೋಧನ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದಶರ್ಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 