ಪಂಚಾಕ್ಷರಿ ಗವಾಯಿಗಳ ಪುಣ್ಯಸ್ಮರಣೆ
Commemoration of Panchakshari Gavai
ಲೋಕದರ್ಶನ ವರದಿ
ಗದಗ 06: ಭೂಮಿಯ ಮೇಲೆ ಯಾರಾದರೂ ಶ್ರೇಷ್ಠ ಸಾಧನೆ ಮಾಡಿದರೆ ಅವರು ಪಂ. ಪಂಚಾಕ್ಷರಿ ಗವಾಯಿ ಹಾಗೂ ಪಂ. ಪುಟ್ಟರಾಜ ಕವಿ ಗವಾಯಿ ಅವರಂತೆ ಆದರ್ಶವಾಗುತ್ತಾರೆ ಎಂದು ಪೂಜ್ಯ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಹೇಳಿದರು.
ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಪಂ. ಪಂಚಾಕ್ಷರಿ ಗವಾಯಿ ಅವರ 82ನೇ ಹಾಗೂ ಪಂ. ಪುಟ್ಟರಾಜ ಕವಿ ಗವಾಯಿ ಅವರ 16ನೇ ಪುಣ್ಯಸ್ಮರಣೆ ಅಂಗವಾಗಿ ನಡೆದ ಧರ್ಮೋತ್ಥೇಜಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗವಾಯಿ ಪರಂಪರೆಯು ಕೇವಲ ಸಂಗೀತಕ್ಕೆ ಸೀಮಿತವಾಗದೆ ಸಾಹಿತ್ಯ, ಕಲೆ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜಕ್ಕೆ ನೀಡಿದ ಮಹತ್ತರ ಪರಂಪರೆಯಾಗಿದೆ ಎಂದು ಅವರು ಹೇಳಿದರು. “ಜನರಿಗೆ ಬದುಕು ಮತ್ತು ಆತ್ಮಸಂತೋಷ ನೀಡುವುದೇ ನಿಜವಾದ ಕಲೆ” ಎಂದು ಅವರು ಅಭಿಪ್ರಾಯಪಟ್ಟರು.
ಬಳ್ಳಾರಿ ಶ್ರೀಮಠದ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಮಾತನಾಡಿ, ಪಂ. ಪುಟ್ಟರಾಜ ಗವಾಯಿಗಳ ವಚನ ಸಾಹಿತ್ಯ ಹಾಗೂ ಸಂಗೀತ ಸೇವೆ ಅಪಾರವಾದುದು. ಅವರ ಜೀವನವು ಸಮಾಜಕ್ಕೆ ಆದರ್ಶವಾಗಿದೆ ಎಂದು ಹೇಳಿದರು.
ಮಾದನಹಿಪ್ಪರಗಿ ವಿರಕ್ತಮಠದ ಪೂಜ್ಯ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಮಾತನಾಡಿ, ನಮ್ಮ ಸುತ್ತಮುತ್ತಲಿನ ಎಲ್ಲರೂ ಶಿವಯೋಗದ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು. ಸಂಗೀತ, ಕಲೆ ಹಾಗೂ ಆಧ್ಯಾತ್ಮಿಕತೆ ಸಮಾಜವನ್ನು ಉನ್ನತಿಗೆ ಕೊಂಡೊಯ್ಯುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ರಾಜು ಗುಡಿಮನಿ ಮಾತನಾಡಿ, ಪಂ. ಪುಟ್ಟರಾಜ ಗವಾಯಿಗಳ ಸೇವೆಯಿಂದ ಸಮಾಜವು ಅನೇಕ ಪಾಠಗಳನ್ನು ಕಲಿತುಕೊಂಡಿದೆ ಎಂದು ಹೇಳಿದರು. ಮಾಜಿ ಶಾಸಕರು ಹಾಗೂ ಗಣ್ಯರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗವಾಯಿ ಸಂಗೀತ ಪರಂಪರೆಯ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 