ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ
Commemoration of fighter Sangolli Rayanna
ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ
ಗದಗ 24: ಬ್ರೀಟಿಷರ ಪಾಲಿಗೆ ಸಿಂಹಸ್ವಪ್ನವಾಗಿ, ತನ್ನ ಇಡೀ ಜೀವನವನ್ನು ಸ್ವಾತಂತ್ರ್ಯ ಹೋರಾಟಕ್ಕೆ ಮೀಸಲಿಟ್ಟು ಕೊನೆಗೆ ದೇಶಕ್ಕಾಗಿ ವೀರ ಮರಣ ಹೊಂದಿದ ಕ್ರಾಂತಿಕಾರಿ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆ ನಡೆಯಲಿದೆ ಎಂದು ಕ್ರಾಂತಿಸೇನಾ ಸಂಘಟನೆಯ ಗೌರವಾಧ್ಯಕ್ಷ ಪ್ರವೀಣ ಹಬೀಬ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕ್ರಾಂತಿಸೇನಾ ಸಂಘಟನೆ ಹಾಗೂ ಸಂಗೋಳ್ಳಿ ರಾಯಣ್ಣನ ಅಭಿಮಾನಿಗಳಿಂದ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಮೇರವಣಿಗೆಯು ಕಿತ್ತೂರ ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ, ಪೋಷ್ಟ್ ಆಫೀಸ್ ಮುಂಬಾಗ, ಪಂಚರೌಂಡ್, ಬಸವೇಶ್ವರ ಸರ್ಕಲ್ ನಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರೆ್ಣ ನಡೆಯಲಿದೆ.
ಹುಯಿಲಗೋಳ ನಾರಾಯಣರಾವ್ ಸರ್ಕಲ್, ಮಹೇಂದ್ರಕರ್ ಸರ್ಕಲ್, ಶ್ರೀ ತೋಂಟದಾರ್ಯ ಆಟೋ ಸ್ಟ್ಯಾಂಡ್, ಗಾಂಧಿ ಸರ್ಕಲ್ ಮಾರ್ಗವಾಗಿ ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಂಪನ್ನವಾಗಲಿದ್ದು, ಎಲ್ಲ ದೇಶಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೋಳಿಸಬೇಕು ಅಂತ ಮನವಿ ಮಾಡಿದರು. ಈ ವೇಳೆ ಜಿಲ್ಲಾ ಶ್ರೀ ಮಹರ್ಷಿ ವಾಲ್ಮೀಕಿ ಮದಕರಿ ನಾಯಕರ ಗಜಪಡೆ ಟ್ರಷ್ಟ್ ಅಧ್ಯಕ್ಷ ಕಿರಣ್ ಯಲ್ಲಪ್ಪ ನಾಯ್ಕರ್, ಪ್ರದೀಪ್ ಸರ್ವದೆ, ರಾಮು ಗಡಾದ, ಕುಮಾರ ಮಾರನಬಸರಿ, ಶ್ರೀಕಾಂತ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 