ಪರಮಪೂಜ್ಯಶ್ರೀ ಚೆನ್ನವೀರ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ
Commemoration program of Parampujyashri Chennaveera Mahaswamy
ಲೋಕದರ್ಶನ ವರದಿ
ಸಿಂದಗಿ 24 : ಪರಮ ಪೂಜ್ಯಶ್ರೀ ಚನ್ನವೀರ ಮಹಾಸ್ವಾಮಿಗಳು ಧಾರ್ಮಿಕ ಕ್ಷೇತ್ರದ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ ಯುಗಪುರುಷರಾಗಿದ್ದರು ಚನ್ನವೀರ ಮಹಾಸ್ವಾಮಿಗಳು ಜೀವನೋದ್ದಕ್ಕೂ ಸರಳತೆ, ಸೇವಾಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದರು. ಅವರು ಲಿಂಗೈಕರಾಗಿ 35 ವರ್ಷಗಳು ಕಳೆದಿದ್ದರೂ ಅವರ ತತ್ವಗಳು, ಆದರ್ಶಗಳು ಹಾಗೂ ಸೇವಾ ಮನೋಭಾವ ಇಂದಿಗೂ ಸಮಾಜಕ್ಕೆ ದಾರೀದೀಪವಾಗಿವೆ. ಯುವಪೀಳಿಗೆ ಪೂಜ್ಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ ಮತ್ತು ಸಂಸ್ಕಾರದ ದಾರಿಯಲ್ಲಿ ಸಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸಾರಂಗಮಠದಲ್ಲಿ ಪರಮಪೂಜ್ಯಶ್ರೀ ಚೆನ್ನವೀರ ಮಹಾಸ್ವಾಮಿಗಳ 35ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ, ಸಮಾಜದ ಬಡ, ಹಿಂದುಳಿದ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬ ಮಹದಾಸೆಯಿಂದ ಪೂಜ್ಯರು ಪದ್ಮರಾಜ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಹಾಗೂ ತಾ.ಶಿ.ಪ್ರ ಮಂಡಳಿಯನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿ ಮೂಡಿಸಿದರು. ಶಿಕ್ಷಣವೆಂಬುದು ಸಮಾಜ ಪರಿವರ್ತನೆಯ ಶಕ್ತಿ ಎಂಬುದನ್ನು ಮನಗಂಡಿದ್ದ ಚೆನ್ನವೀರ ಮಹಾಸ್ವಾಮಿಗಳು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ದಾರಿಯನ್ನು ತೆರೆದರು. ಅವರ ದೂರದೃಷ್ಟಿ ಹಾಗೂ ಸಮಾಜಮುಖಿ ಚಿಂತನೆಯಿಂದ ಅನೇಕ ಕುಟುಂಬಗಳ ಬದುಕು ಬೆಳಗಿದ್ದು, ಶಿಕ್ಷಣದ ಮೂಲಕ ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ಮಾಡಿದ್ದಾರೆೆ ಎಂದರು.
ಸಾರಂಗಮಠದ ಉತ್ತರಾಧಿಕಾರಿ ಡಾ. ವಿಶ್ವಪ್ರಭುಶಿವಾಚಾರ್ಯರು ಮಾತನಾಡಿ, ಚನ್ನವೀರ ಮಹಾಸ್ವಾಮಿಗಳ ಸೇವೆ ಕೇವಲ ಒಂದು ಮಠಕ್ಕೆ ಸೀಮಿತವಾಗಿರಲಿಲ್ಲ. ಅವರು ಶಿಕ್ಷಣ, ಧರ್ಮ ಹಾಗೂ ಸಮಾಜ ಸೇವೆಯ ಮೂಲಕ ನಾಡಿನ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಸಮರ್ಿಸಿದ್ದರು. ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಸ್ಕಾರ ಮತ್ತು ದೇಶಭಕ್ತಿ ಬೆಳೆಸುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಪೂಜ್ಯರು ಇಂದಿನ ಶಿಕ್ಷಣ ಕ್ಷೇತ್ರಕ್ಕೂ ಆದರ್ಶಪ್ರಾಯರಾಗಿದ್ದಾರೆ. ಧಾರ್ಮಿಕ ಸೇವೆಯೊಂದಿಗೆ ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಅವರು ನೀಡಿದ ಮಾರ್ಗದರ್ಶನ ಸದಾ ಪ್ರೇರಣೆಯಾಗಲಿದೆ ಎಂದರು. ಮಾಡಬಾಳ ಆಯುಷ್ ಸಮುದಾಯ ಆರೋಗ್ಯಾಧಿಕಾರಿ ಚಂದ್ರಕಾಂತ ಬಿರಾದಾರ ಅವರು ಕಾಯಕಯೋಗಿ ಶ್ರೀ ಚೆನ್ನವೀರ ಮಹಾಸ್ವಾಮಿಗಳವರ ಕುರಿತು ಉಪನ್ಯಾಸ ನೀಡಿದರು. ಶಾಸಕ ಅಶೋಕ ಮನಗೂಳಿ ಹಾಗೂ ಧರ್ಮಪತ್ನಿ ನಾಗರತ್ನ ಮನಗೂಳಿ ಅವರಿಗೆ ಸನ್ಮಾನಿಸಿ ಗೌರವಿಸಿದರು. ಶ್ರೀಮಠದ ಪ್ರಸಾದನಿಲಯದ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಅಶೋಕ ವಾರದ, ಎಂ.ಎಸ್.ಹೈಯಾಳಕರ್, ವಿರೇಶ ಜೋಗೂರ, ಡಾ. ಶರಣು ಜೋಗೂರ, ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ವ್ಹಿ.ಪಿ.ನಂದಿಕೋಲ, ಪಿ.ವ್ಹಿ.ಮಹಲಿನಮಠ, ಎಸ್.ವೈ.ಯರಲಡ್ಡಿ, ಶರಣಗೌಡ ಪಾಟೀಲ, ಎನ್.ಬಿ.ಪೂಜಾರಿ, ಡಿ.ಎಂ.ಸರಶೆಟ್ಟಿ, ಜಿ.ಎಸ್.ಜಂಗಿನಮಠ, ಸೋಮಶೇಖರ ಜೋಗೂರ, ದೃವ ನಾಗರಾಜ ಬಿರಾದಾರ, ಶಕುಂತಲಾ ಹಿರೇಮಠ, ಸಾಹೇಬಗೌಡ ದುದ್ದಗಿ, ನಾಗರಾಜ ಮುರಗೋಢ, ಶ್ರೀಶೈಲ ನಂದಿಕೋಲ, ಶ್ರೀದೇವಿ ಸಿಂದಗಿ, ಸೇರಿದಂತೆ ಸಂಸ್ಕಾರ ಶಿಬಿರದ ವಿದ್ಯಾರ್ಥಿಗಳು ಇನ್ನಿತರರು ಇದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 