ಕಾರ್ಮಿಕರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಬೇಕು: ಜಿಲ್ಲಾಧಿಕಾರಿ
ಧಾರವಾಡ 06 : ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಇಟ್ಟಂಗಿ ಕಾಖರ್ಾನೆ, ಮನೆಗೆಲಸ, ಕಿರಾಣಿ, ಹೋಟೆಲ್, ಕೆಲಸದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಇಂತಹ ಮಕ್ಕಳನ್ನು ಪತ್ತೆ ಹಚ್ಚಿ, ಪುನರ್ವಸತಿ ಕಲ್ಪಿಸುವಲ್ಲಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿರಬೇಕೆಂದು ರಾಷ್ಟ್ರೀಯ ಬಾಲಕಾರ್ಮಿಕರ ಯೋಜನಾ ಸಂಘ ಜಿಲ್ಲಾ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ರಾಷ್ಟ್ರೀಯ ಬಾಲಕಾಮರ್ಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳನ್ನು ಸೇರಿಸಿ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳ ತಂಡ ರಚಿಸಿ, ಬಾಲಕಾರ್ಮಿಕರ ಪದ್ಧತಿ ನಿಮರ್ೂಲನೆ ಹಾಗೂ ಬಾಲ ಕಾಮರ್ಿಕರಿಗೆ ಅಗತ್ಯವಿರುವ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕರ ಇಲಾಖೆ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಬಾಲಕಾಮರ್ಿಕರನ್ನು ಹೊಂದಿರುವ ಕೈಗಾರಿಕೆ ಹಾಗೂ ಸಣ್ಣ ಪುಟ್ಟ ವ್ಯಾಪಾರಿಗಳ ಹಾಗೂ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ, ಕಠಿಣ ಕ್ರಮಗೈಗೊಳ್ಳಬೇಕೆಂದು ಸೂಚಿಸಿದರು.
ಜೂನ್ 12 ರಂದು ಆಚರಿಸಲಿರುವ ವಿಶ್ವ ಬಾಲಕಾಮರ್ಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಎಮ್ಮಿಕೇರಿ ಸಕರ್ಾರಿ ಶಾಲಾ ಆವರಣದಲ್ಲಿ ಆಯೋಜಿಸಲು ಮತ್ತು ಕಾರ್ಯಕ್ರಮದಲ್ಲಿ ಗೌಳಿ ಜನಾಂಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಜನರು, ಬಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಹಿತಿ ತಲುಪಿಸಿ, ಆ ಮೂಲಕ ಬಾಲಕಾರ್ಮಿಕರ ಪದ್ಧತಿಯನ್ನು ಹೋಗಲಾಡಿಸಲು ಜನಜಾಗೃತಿ ಮೂಡಿಸಲು ಕ್ರಮಕೈಗೊಳ್ಳಬೇಕೆಂದು ಅವರು ಹೇಳಿದರು.
ಸಭೆಯಲ್ಲಿ ಯೋಜನಾ ಸಂಘದ 2018-19ನೇ ಸಾಲಿನಲ್ಲಿ ಕೈಗೊಂಡ ಕಾರ್ಯಕ್ರಮಗಳಿಗೆ ಅನುಮೋದಿಸಿ, ಪ್ರಸಕ್ತ 2019-20ನೇ ಸಾಲಿನಲ್ಲಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳಿಗೆ ಒಪ್ಪಿಗೆ ನೀಡಲಾಯಿತು. ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳಿಗೆ ಅಗತ್ಯ ಹಣದ ಆಯವ್ಯಯವನ್ನು ಸಕರ್ಾರಕ್ಕೆ ಕಳುಹಿಸಲು ತೀಮರ್ಾನಿಸಲಾಯಿತು.
ಕಾಮರ್ಿಕ ಇಲಾಖೆ ಸಹಾಯಕ ಆಯುಕ್ತೆ ಮೀನಾ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾಯರ್ಾದಶರ್ಿ, ಆರ್.ಎಸ್. ಚಿಣ್ಣನ್ನವರ, ಎಸಿಪಿ ಎಸ್.ಎಂ. ಸಂದಿಗವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೆಶಕ ಬಸವರಾಜ ವರವಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಹಾದೇವ ಹುಲಗೆಜ್ಜಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪ್ರಸಕ್ತ ಸಾಲಿನ ಕಾರ್ಯ ಚಟುವಟಿಕೆಗಳ ಕುರಿತು ತಮ್ಮ ಸಲಹೆ, ಅಭಿಪ್ರಾಯ ನೀಡಿದರು.ಜನಾ ಸಂಘದ ಯೋಜನಾಧಿಕಾರಿ ಬಾಳನಗೌಡ ಪಾಟೀಲ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 