ಸರಕಾರಿ ಮಹಿಳಾ ಪದವಿ ಕಾಲೇಜಿಗೆ ಆಯುಕ್ತರು ಭೇಟಿ
Commissioner visits Government Women's Degree College
ಕೊಪ್ಪಳ 07: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ಎನ್. ಮಂಜುಶ್ರೀ, ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಗುರುವಾರ ಭೇಟಿ ನೀಡಿದರು.
ಆಯುಕ್ತರು ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ವಿದ್ಯಾರ್ಥಿನಿಯರು ಆಯುಕ್ತರು ಕೇಳಿದ ಪ್ರೆಶ್ನೆಗಳಿಗೆ ಬಹಳ ಸಂತೋಷ ಮತ್ತು ಆತ್ಮವಿಶ್ವಾಸದಿಂದ ಉತ್ತರಿಸಿದರು. ಕಾಲೇಜಿಗೆ ಉತ್ತಮ ಶೈಕ್ಷಣಿಕ ಮೂಲಭೂತ ಸೌಕರ್ಯಗಳು ಅಗತ್ಯ ಇವೆ ಎಂದು ವಿದ್ಯಾರ್ಥಿನಿಯರು ಆಯುಕ್ತರಿಗೆ ಮನವಿ ಮಾಡಿಕೊಂಡರು. ಆಯುಕ್ತರು ಕಾಲೇಜಿನ ಭೋಧಕ, ಭೋಧಕೇತರ ಮತ್ತು ಅತಿಥಿ ಉಪನ್ಯಾಸಕರ ಜತೆ ಸಂವಾದ ನಡೆಸಿದರು. ಕಾಲೇಜಿನ ಪ್ರಾಧ್ಯಾಪಕರ ಪ್ರೇರಣೆ ಮತ್ತು ಸಮರೆ್ಣ ಮನೋಭಾವನೆಯನ್ನು ಆಯುಕ್ತರು ಪ್ರಶಂಸೆ ವ್ಯಕ್ತ ಪಡಿಸಿದರು. ಈ ಮಹಿಳಾ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಬಹಳ ಹರ್ಷಚಿತ್ತದಿಂದ ಮತ್ತು ಸಂತೋಷದಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಅನಿಸಿಕೆಯನ್ನು ಹಂಚಿಕೊಂಡರು.
ಆಯುಕ್ತರು ಭೇಟಿ ನೀಡಿದ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ, ಕೊಪ್ಪಳದ ಲೀಡ್ ಕಾಲೇಜಿನ ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ, ಕಾಲೇಜಿನ ಪ್ರಾಧ್ಯಾಪಕರಾದ ನಾಗರತ್ನ ತಮ್ಮಿ ನಾಳ, ಡಾ. ಗವಿಸಿದ್ದಪ್ಪ ಮುತ್ತಾಳ, ಡಾ. ಹುಲಿಗೆಮ್ಮ, ವಿಠೋಬ, ಪ್ರಕಾಶ ಗೌಡ, ಡಾ. ಮಲ್ಲಿಕಾರ್ಜುನ, ಡಾ. ನರಸಿಂಹ, ಡಾ. ಅಶೋಕ ಕುಮಾರ, ಶುಭ, ಸುಮಿತ್ರಾ, ಸುಮಯ್ಯ, ಅಲ್ಲಾಭಕ್ಷ, ಹನುಮಪ್ಪ ಮೇಟಿ, ಕಾಲೇಜಿನ ಎಲ್ಲ ಭೋಧಕ, ಭೋದಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 