ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ: ರಾಘವೇಂದ್ರ ನೀಲಣ್ಣವರ
Commit to the resolve for good health: Raghavendra Neelannavar
ಲೋಕದರ್ಶನ ವರದಿ
ಮುಧೋಳ, ಸೆ.22: ತಾಲೂಕಿನ ಶಿರೋಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಸೋಮವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಂ. ಡಾಂಗೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಪನ್ಮೂಲ ವ್ಯಕ್ತಿ ಹಾಗೂ ಯೋಗ ಗುರು ರಾಘವೇಂದ್ರ ನೀಲಣ್ಣವರ ಅವರು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಉತ್ತಮ ಜೀವನಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದ ಅವರು, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಅಗತ್ಯವಾದ ಗುಣಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ, ವಿದ್ಯಾರ್ಥಿ ಜೀವನವನ್ನು ಉತ್ತಮ ಮೌಲ್ಯಗಳಿಂದ ರೂಪಿಸಿಕೊಂಡು, ದೇಶಕ್ಕೆ ಕೊಡುಗೆ ನೀಡುವಂತಹ ಸಾಧಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನವೀನ ಹುಣಶೀಕಟ್ಟಿ ಅವರು ರೇಬಿಸ್ ಕಾಯಿಲೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ರೇಬಿಸ್ ತಡೆಗಟ್ಟುವಲ್ಲಿ ವೈದ್ಯಕೀಯ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದ್ದು, ಗ್ರಾಮಸ್ಥರು ರೇಬಿಸ್ ಕಾಯಿಲೆಯ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.
ಮೇಲ್ವಿಚಾರಕರಾದ ಶಿವಾನಂದ ಅರಮನೆ ಅವರು ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಿ, ಪ್ರತಿಜ್ಞೆ ಮಾಡಿಸಿದರು. ಶಿಕ್ಷಕ ಮಲಪ್ಪ ಚಿಕ್ಕಲಕಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಾಲೆಯ ಸಹಶಿಕ್ಷಕರು, ಸೇವಾ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 