ಆರೋಗ್ಯದ ಸಂಕಲ್ಪಕ್ಕೆ ಬದ್ಧರಾಗಿ, ಯೋಗವನ್ನು ಮೈಗೂಡಿಸಿಕೊಳ್ಳಿ: ರಾಘವೇಂದ್ರ ನೀಲಣ್ಣವರ
Commit to the resolve of health and embrace yoga: Raghavendra Neelannavara
ರನ್ನ ಬೆಳಗಲಿ:ಸೆ. 23., ಪಟ್ಟಣದ ಮಹಾಲಿಂಗೇಶ್ವರ ಪದವಿ, ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಜರುಗಿತು.
ಯೋಗ ಶಿಕ್ಷಕ ರಾಘವೇಂದ್ರ ನೀಲಣ್ಣವರ ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ ಯೋಗವನ್ನು ಮೈಗೂಡಿಸಿಕೊಳ್ಳಿ ಎಂದು ಕರೆ ನೀಡುವುದರ ಜೊತೆಗೆ ಪ್ರಸ್ತುತ ದಿನಗಳಲ್ಲಿ ಯುವ ಸಮುದಾಯ ಅನೇಕ ಮಾದಕ ವ್ಯಸನಗಳಿಗೆ ತುತ್ತಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಯ ಜೀವನದಲ್ಲಿ ಇಂದ್ರಿಯಗಳನ್ನು ನಿಗ್ರಹಿಸಬೇಕು. ಇಂದ್ರಿಯಗಳ ನಿಗ್ರಹಣಕ್ಕೆ ಪತಂಜಲಿ ಮಹರ್ಷಿಗಳ ಅಷ್ಟಾಂಗ ಯೋಗವನ್ನು ಅರಿತುಕೊಳ್ಳಿ. ತಂದೆ ತಾಯಿಯರ ತ್ಯಾಗ, ಗುರುವಿನ ಶ್ರಮವನ್ನು ಅರಿತು ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಬೇಕು ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 