ಕುಡಚಿ ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಬದ್ಧ: ಶಾಸಕ ತಮ್ಮಣ್ಣವರ
Committed to complete development of Kudachi constituency: MLA Thammanavara
ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ತಮ್ಮಣ್ಣವರ ಭೂಮಿ ಪೂಜೆ
ಪಾಲಬಾವಿ 23: ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರರವರು ಮಾ.23 ರಂದು ಕುಡಚಿ ಮತಕ್ಷೇತ್ರದ ಕುಡಚಿ, ಶಿರಗೂರ, ಹಾಲಶಿರಗೂರ, ಚಿಂಚಲಿ ಪಟ್ಟಣ ಕೂಡುವ ರಸ್ತೆಗೆ 285 ಕೋಟಿ ರೂಗಳ ವೆಚ್ಚದಲ್ಲಿ ಡಾಂಬರೀಕರಣ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಹೇಂದ್ರ ತಮ್ಮಣ್ಣವರ ರವರು ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡುತ್ತ ಕುಡಚಿ ಮತಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಪಂಚ ಗ್ಯಾರಂಟಿಗಳ ಅನುಷ್ಠಾನದಲ್ಲಿಯೂ ನಾನು ನನ್ನ ಕುಡಚಿ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನವನ್ನು ತರುವ ಪ್ರಯತ್ನ ಮಾಡುತ್ತಿದ್ದೇನೆ. ರಸ್ತೆಗಳ ಡಾಂಬರೀಕರಣ, ಹೆಚ್ಚುವರಿ ಶಾಲಾ ಕೊಠಡಿ, ಸಮುದಾಯ ಭವನಗಳು, ದೇವಸ್ಥಾನಗಳಲ್ಲಿ ಫೇವರ್ಸ್ ಅಳವಡಿಕೆ, ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳು ಸೇರುದಂತೆ ಹಲವಾರು ಜನಪರ ಯೋಜನೆಯನ್ನು ನನ್ನ ಕ್ಷೇತ್ರಕ್ಕೆ ತರುವ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ಶಾಸಕನಾಗಿದ್ದೇನೆ. ಕ್ಷೇತ್ರದ ಜನರ ಸೇವೆ ಮಾಡುವುದು ನನ್ನ ಕರ್ತವ್ಯವಾಗಿದೆ. ಕ್ಷೇತ್ರದ ಜನತೆಯ ಆಶೀರ್ವಾದವು ನನ್ನ ಮೇಲಿರಲಿ ಎಂದರು.
ಈ ಸಂದರ್ಭದಲ್ಲಿ ಕುಡಚಿ ಮತಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ಗುತ್ತಿಗೆದಾರ ಸದಾಶಿವ ದಳವಾಯಿ, ಗಿರಿಗೌಡ ಪಾಟೀಲ, ಮಾರುತಿ ಕಾಂಬಳೆ, ವರ್ಧಮಾನ ಶಿರಹಟ್ಟಿ, ಮಹಾದೇವ ಮಗದುಮ್ಮ, ಈಶ್ವರ ಮುರುಡಿ, ಕಲ್ಮೇಶ ಕಾಂಬಳೆ, ಲಕ್ಷ್ಮಣ ಬಾಂವೆ, ಸಂಜು ಚೌಗಲಾ, ನೀಲಪ್ಪ ಕಾಂಬಳೆ, ಇಸಾಕ್ ತಾಂಬೊಳಿ, ಬಾಬಾಸಾಹೇಬ್ ಮುಲ್ಲಾ, ಸುಭಾಷ ದಳವಾಯಿ, ಯಲ್ಲಪ್ಪ ಹುಲ್ಲೇನವರ, ಈಶ್ವರ ಕುಂಬಾರ, ಹಾಲಸಿದ್ದೇಶ್ವರ ದೇವಸ್ಥಾನದ ಅರ್ಚಕ ಗೂಳಪ್ಪ ಪೂಜಾರಿ, ಶಂಕರ ದಳವಾಯಿ, ಸಚಿನ್ ಹಳಕಲ್ಲ, ಸಹಾಯಕ ಅಭಿಯಂತರ ಕಾಂಬಳೆ, ಪಿಡಿಒ ಸೌಜನ್ಯ ಪ್ರಭಾಕರ, ಹಾಲಪ್ಪ ಸವದತ್ತಿ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 