ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡರು ಮನವಿ
Communist Party of India leaders appeal for drinking water facilities
ಲೋಕದರ್ಶನ ವರದಿ
ಹೂವಿನ ಹಡಗಲಿ 22: ಬೇಸಿಗೆ ಕಾಲ ಬಿಸಿಲಿನ ಝಳ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಾಮಾನ್ಯರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ. ಹಳ್ಳಿಗಳಿಂದ ಪ್ರತಿನಿತ್ಯ ತಾಲೂಕು ಕಚೇರಿ ಒಳಗೊಂಡಂತೆ ವಿವಿಧ ಇಲಾಖೆಗಳ ಕೆಲಸ ಕಾರ್ಯಗಳಿಗೆ ಸಾವಿರಾರು ಜನ ಬರುವರು. ಎಷ್ಟೋ ಬಡ ಜನರು ಕಾಸು ಕೊಟ್ಟು ಬಾಟಲ್ ನೀರು ಖರೀದೀಸಲಾಗದೆ ಅಶುದ್ಧ ನೀರು ಕುಡಿಯುತ್ತಿರುವುದು ವಿಪರ್ಯಾಸ. ಜನರ ಆರೋಗ್ಯದ ಹಿತ ದೃಷ್ಟಿಯಿಂದ ಹೊಸ ಹಳೇ ಬಸ್ ನಿಲ್ದಾಣ, ತಾಲೂಕು ಕಚೇರಿ, ಸಂತೆ ಮೈದಾನ,ಎ ಪಿ ಎಂ ಸಿ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಶಾಂತವೀರ ಸಮುದಾಯ ಭವನದ ಹತ್ತಿರ ಶುದ್ಧ ನೀರು ಒದಗಿಸುವ ಕಾರ್ಯಕ್ಕೆ ಪುರಸಭೆ ಮುಂದಾಗಲಿ ಎಂಬುದು ಪಕ್ಷದ ಆಶಯ.ಪಟ್ಟಣದ ಹರಪನಹಳ್ಳಿ ರಸ್ತೆಯಲ್ಲಿರುವ ಪುರಸಭೆ ಕಚೇರಿಗೆ ತೆರಳಿ ಸಿಪಿಐ ಪಕ್ಷದ ನಾಯಕರಾದ ಬಸವರಾಜ ಸಂಶಿ, ಎಚ್ ಎಂ ಸಂತೋಷ್, ಬಾವಾಜಿ ಜಂಗ್ಲಿಸಾಬ್, ಗುಡಿಹಳ್ಳಿ ಹಾಲೇಶ ಮನವಿ ಪತ್ರ ಸಲ್ಲಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 