ಸಮುದಾಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ
ಬಾಗಲಕೋಟೆ: ವಿಶ್ವ ಏಡ್ಸ್ ದಿನದ ಅಂಗವಾಗಿ "ಸಮುದಾಯಗಳು ವ್ಯತ್ಯಾಸವನ್ನುಂಟು ಮಾಡುತ್ತವೆ" ಎಂಬ ಘೋಷ ವ್ಯಾಖ್ಯದೊಂದಿಗೆ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ರವಿವಾರ ರಾಜ್ಯ ಏಡ್ಸ್ ಪ್ರಿವೆನಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ಜಾಗೃತಿ ಜಾಥಾ ಜಿಲ್ಲಾ ಆಸ್ಪತ್ರೆಯ ಆವರಣದಿಂದ ಪ್ರಾರಂಭವಾಗಿ ಮುಖ್ಯರಸ್ತೆ ಮೂಲಕ ನಗರಸಭೆ, ಎಸ್.ಬಿ.ಐ ಬ್ಯಾಂಕ್, ಎಲ್ಐಸಿ ವೃತ್ತ, ಪೊಲೀಸ್ ಪ್ಯಾಲೇಸ್, ನವನಗರ ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಿ ಜಿಲ್ಲಾಡಳಿತ ಭವನಕ್ಕೆ ಮುಕ್ತಾಯಗೊಂಡಿತು.
ಜಾಥಾದಲ್ಲಿ ಸಜ್ಜಲಶ್ರೀ ನಸರ್ಿಂಗ್ ಮಹಾವಿದ್ಯಾಲಯ, ಪಿ.ಎನ್.ಎಂ.ಎನ್ ದಂತ ವೈದ್ಯಕೀಯ ಮಹಾವಿದ್ಯಾಲಯ, ಅರುಣೋದಯ ಪ್ಯಾರಾ ಮೆಡಿಕಲ್ ಕಾಲೇಜ, ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆಯ ಪ್ಯಾರೇ ಮೆಡಿಕಲ್ ಕಾಲೇಜ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಆಯುವರ್ೇಧ ಮಹಾವಿದ್ಯಾಲಯ ಹೋಮಿಯೋಪತಿ ಮಹಾವಿದ್ಯಾಲಯ ಸೇರಿದಂತೆ ಇತರೆ ಕಾಲೇಜಿನ ಒಟ್ಟು ಅಂದಾಜು 500 ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು. ಜಾಥಾದೂದ್ದಕ್ಕೂ ಘೋಷಣೆಗಳನ್ನು ಕೂಗಿದರು.
ಜಾಥಾ ಕಾರ್ಯಕ್ರಮದ ಮಧ್ಯದಲ್ಲಿ ನರೇನೂರಿನ ಸಂಗನಬಸಯ್ಯ ಹಿರೇಮಠ ಗೀಗೀ ಪದ ತಂಡವು ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಗೀತೆಗಳನ್ನು ಹಾಡಿದರು. ಎಲ್.ಐ.ಸಿ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ನಿಮರ್ಿಸಲಾಯಿತು. ಇದೇ ಸಂದರ್ಭದಲ್ಲಿ ಎಚ್ಐವಿ ಏಡ್ ಕುರಿತು ಡಿಸೆಂಬರ 2 ಮತ್ತು 3 ರಂದು ಹಮ್ಮಿಕೊಂಡ ಮನೆ ಮನೆ ಸಮಗ್ರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಜಾಥಾದಲ್ಲಿ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಜಿ.ಪಂ ಜಿಲ್ಲಾ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸುಜಾತಾ ಸಿಂಗಾಡೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜಯಶ್ರೀ ಎಮ್ಮಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಸೇರಿದಂತೆ ರೆಡ್ಕ್ರಾಸ್ ಸಂಸ್ಥೆ, ಚೈತನ್ಯ ಮಹಿಳಾ ಸಂಘ, ಮಿಲನ ಸಂಘ, ಕೆ.ಎಚ್.ಪಿ.ಟಿ, ವಿಹಾನ ಸಿಎಸ್ಸಿ ಯೋಜನೆಯ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 