ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
Community awareness is needed to eliminate child labour: District Collector C.N. Shridhar
ಲೋಕದರ್ಶನ ವರದಿ
ಗದಗ 12 : ಮಕ್ಕಳನ್ನು ಬಾಲ ಕಾರ್ಮಿಕರನ್ನಾಗದಂತೆ ತಡೆಯುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರುನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವು ಕೇವಲ ಆಚರಣೆಗೆ ಸೀಮಿತವಾಗದೇ, ಸಮಾಜದಲ್ಲಿ ಜಾಗೃತಿ ಮೂಡಿಸುವ ಸಂದರ್ಭವಾಗಬೇಕು ಎಂದು ಅವರು ಹೇಳಿದರು. ಮಕ್ಕಳು ಓದುವ ವಯಸ್ಸಿನಲ್ಲಿ ದುಡಿಮೆಗೆ ತೊಡಗಿದರೆ ಅದರ ದುಷ್ಪರಿಣಾಮಗಳನ್ನು ಸಮಾಜವೇ ಅನುಭವಿಸಬೇಕಾಗುತ್ತದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ, ಮಾರ್ಗದರ್ಶನ ಹಾಗೂ ಮೌಲ್ಯಗಳನ್ನು ನೀಡುವುದು ಅಗತ್ಯ ಎಂದು ತಿಳಿಸಿದರು. ಸುತ್ತಮುತ್ತ ಬಾಲ ಕಾರ್ಮಿಕರು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಅವರು ಮನವಿ ಮಾಡಿದರು. ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವ ಮೂಲಕವೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 