ಸಾರ್ವಜನಿಕ ಕಾರ್ಯಗಳಿಗೆ ಸಮುದಾಯ ಭವನ ಸಹಕಾರಿ: ಈರಣ್ಣ ಕಡಾಡಿ
Community hall useful for public activities: Iranna Kadadi
ಘಟಪ್ರಭಾ 07 : ಗ್ರಾಮೀಣ ಭಾಗದ ಜನರಿಗೆ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಸೂಕ್ತ ಸ್ಥಳಾವಕಾಶದ ಅಗತ್ಯವಿದ್ದು, ಸಂಸದರ ನಿಧಿಯನ್ನು ಸದ್ಬಳಕೆ ಮಾಡಿಕೊಂಡು ನಿರ್ಮಿಸಿರುವ ಸಮುದಾಯ ಭವನವು ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಹಕಾರಿಯಾಗಲಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಅವರು ಶುಕ್ರವಾರ ರಂದು ರಾಜಾಪೂರ ಗ್ರಾಮದ ಚುನಿಮಟ್ಟಿಯ ಚೂನಮ್ಮಾದೇವಿ ದೇವಸ್ಥಾನದ ಆವರಣದಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ30 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.
ರಾಜಾಪೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಅಳವಡಿಕೆಗೆ ರೂ5 ಲಕ್ಷ, ದುರ್ಗಾದೇವಿ ದೇವಸ್ಥಾನದ ಬಳಿ ಸಮುದಾಯ ಭವನ ನಿರ್ಮಾಣಕ್ಕೆ ರೂ5 ಲಕ್ಷ ಹಾಗೂ ರಾಜಾಪೂರ-ಕಲ್ಲೋಳಿ ಕೊರೆವ್ವನ ಹಳ್ಳದ ಬಳಿ ರೂ1 ಕೋಟಿ ಅನುದಾನದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಸೇರಿದಂತೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಗೋಪಾಲ ಕಮತಿ, ವಿಠ್ಠಲ ಎಣ್ಣಿ, ಚಿನ್ನಪ್ಪ ಪಾಟೀಲ, ಲಕ್ಷ್ಮಣ ಗೌಡರ, ಅಜ್ಜಪ್ಪ ಪಂಡ್ರೋಳಿ, ಹಣಮಂತ ಹುದ್ದಾರ, ರಾಮಚಂದ್ರ ಕೊಡ್ಲಿ, ಕೆಂಪಣ್ಣ ಗಡಹಿಂಗ್ಲೇಜ್, ಸುರೇಶ ಬೈರುಗೋಳ, ಮುತ್ತೆಪ್ಪ ಜೆಟ್ಟೆನ್ನವರ, ಮುತ್ತೆಪ್ಪ ಜೋಕಾನಟ್ಟಿ, ಶಾಂತಪ್ಪ ಯಂಕಸಂಬಿ ಸೇರಿದಂತೆ ದೇವಸ್ಥಾನ ಕಮಿಟಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರಾಜಾಪೂರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಉಪಸ್ಥಿತರಿದ್ದರು.
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ 