ಕೊಡಗು,ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ ಕಾರ್ಯಕ್ರಮ
ಲೋಕದರ್ಶನ ವರದಿ
ಹಾವೇರಿ : ಭಾರತ ವಿದ್ಯಾಥರ್ಿ ಫೆಡರೇಷನ್ (ಎಸ್ಎಫ್ಐ) ಡಿವೈಎಫ್ಐ, ಸಿಐಟಿಯು ಸಂಘಟನೆಯ ಕಾರ್ಯಕರ್ತರು ನಗರದಲ್ಲಿಂದು ಕೊಡಗು ಮತ್ತು ಕೇರಳ ನೆರೆ ಸಂತ್ರಸ್ತರಿಗೆ ಪರಿಹಾರ ನಿಧಿಯನ್ನು ಸಂಗ್ರಹ ಮಾಡಿದರು. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ, ಬಸ್ ನಿಲ್ದಾಣ ಹಾಗೂ ಸಾರ್ವಜನಿಕರ ಬಳಿ ಹಣ ಸಂಗ್ರಹ ಮಾಡಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಸಹಕಾರ್ಯದಶರ್ಿ ಬಸವರಾಜ ಬೋವಿ ಮಾತನಾಡಿ, ಕೇರಳದಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯು 12 ಜಿಲ್ಲೆಗಳಲ್ಲಿ ಹಿಂದೆಂದೂ ಕಾಣದಂತಹ ಅಪಾರ ಹಾನಿಗಳನ್ನು ಉಂಟು ಮಾಡಿದೆ. ಸಾವಿರಾರು ಮಂದಿ ಮನೆ, ಆಸ್ತಿ ಪಾಸ್ತಿಯನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ, ನೂರಾರು ಜನ ಸಾವಿಗೀಡಾಗಿದ್ದಾರೆ. ರಸ್ತೆ, ರೈಲು, ವಿಮಾನ ಮಾರ್ಗಗಳು ಸಂಪೂರ್ಣ ಬಂದ್ ಆಗಿ ಜನರು ಅಪಾರ ಸಂಕಷ್ಟದಲ್ಲಿ ಸಿಲುಕಿರುತ್ತಾರೆ. ರಾಜ್ಯದ ಕೊಡುಗು ಸಹ ನೆರೆ ಹಾವಳಿಗೆ ತುತ್ತಾಗಿದೆ. ಹತ್ತಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಜನರು ಇಂದು ಈ ಪ್ರವಾಹದಿಂದಾಗಿ ಮನೆ, ಆಸ್ತಿ ಪಾಸ್ತಿ ಕಳೆದುಕೊಂಡು ಸಕರ್ಾರ ತೆರೆದಿರುವ ಗಂಜಿ ಕೇಂದ್ರಗಳಲ್ಲಿ ವಾಸಿಸುತ್ತಿದ್ದಾರೆ ಎಂದರು.
ಸಂಕಷ್ಟದಲ್ಲಿ ಸಿಲುಕಿರುವ ಕೇರಳ ಮತ್ತು ಕೊಡಗು ಜನತೆಯ ಸಹಾಯಕ್ಕಾಗಿ ಹೊದಿಕೆ, ಬಟ್ಟೆ, ಔಷಧಿ - ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳು ಮತ್ತು ನಿಧಿಯನ್ನು ವಿದ್ಯಾಥರ್ಿಗಳು ಮತ್ತು ಸಾರ್ವಜನಿಕರು ಉದಾರ ಸಹಾಯ ಮಾಡುತ್ತಿದ್ದಾರೆ, ಕೊಡಗು ಮತ್ತು ಕೇರಳವೆಂಬ ಸುಂದರ ನಗರಗಳನ್ನು ಮತ್ತೆ ಕಟ್ಟಲು ಎಲ್ಲರೂ ಪರಿಶ್ರಮ ಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಿಐಟಿಯು ಮುಖಂಡರಾದ ವಿನಾಯಕ ಕುರುಬರ, ಡಿವೈಎಫ್ಐ ಮುಖಂಡರಾದ ಮುಕ್ತಾನಂದ ಹಿರೇಮನಿ, ಎಸ್ಎಫ್ಐ ಮುಖಂಡರಾದ ಬಸವರಾಜ ಅಳಲಗೇರಿ, ಶ್ರೀಕಾಂತ, ಸೋಮಶೇಖರ ವಾಲ್ಮೀಕಿ, ಬಸವರಾಜ ತಳವಾರ, ವಕೀಲರಾದ ನಾರಾಯಣ ಕಾಳೆ ಹಾಗೂ ಮುಂತಾದವರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 