ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಯಶಸ್ವಿ

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಯಶಸ್ವಿ  Competitive Exam Training Workshop a Success

        ತಾಳಿಕೋಟಿ: ಪಟ್ಟಣದ ವಿ.ವಿ. ಸಂಘದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯ ಐ ಕ್ಯು ಎ ಸಿ ಹಾಗೂ ಕೌಶಲ್ಯ ಅಭಿವೃದ್ಧಿ ಘಟಕದ ಅಡಿಯಲ್ಲಿ ಟಿಇಟಿ-ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.  

ಮುಖ್ಯ ಅತಿಥಿಗಳಾಗಿ ವಿಜಯಪುರದ ಮಾರ್ಗದರ್ಶಿ ಕರಿಯರ್ ಅಕಾಡೆಮಿ, ಪ್ರಭಾಕರ ಬನಸೋಡೆ ಅವರು ಭೂಗೋಳಶಾಸ್ತ್ರ ವಿಷಯದ ಕುರಿತು ಉಪನ್ಯಾಸ ನೀಡಿ, ವಿಷಯವನ್ನು ಸುಲಭವಾಗಿ ಅರ್ಥೈಸಿಕೊಂಡು ದೀರ್ಘಕಾಲ ಸ್ಮೃತಿಯಲ್ಲಿ ಉಳಿಸಿಕೊಳ್ಳುವ ಓದುವ ವಿಧಾನಗಳು, ಪ್ರಮುಖ ಅಂಶಗಳನ್ನು ನೆನಪಿಟ್ಟುಕೊಳ್ಳುವ ತಂತ್ರಗಳು ಹಾಗೂ ಪರೀಕ್ಷೆಗಳಲ್ಲಿ ಸರಿಯಾದ ಉತ್ತರಗಳನ್ನು ಆಯ್ಕೆ ಮಾಡುವ ವಿಧಾನಗಳನ್ನು ಸರಳವಾಗಿ ವಿವರಿಸಿದರು.  

ಉಪನ್ಯಾಸಕ ಜಕರಾಯ ಪೂಜಾರಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪುನರಾವರ್ತಿತವಾಗಿ ಕೇಳಲಾಗುವ ಪ್ರಶ್ನೆಗಳನ್ನು ಗುರುತಿಸಿ ಅಧ್ಯಯನ ಮಾಡುವ ಮಹತ್ವವನ್ನು ತಿಳಿಸಿದರು. ಓದಿದ ವಿಷಯಗಳನ್ನು ದೀರ್ಘಕಾಲ ಸ್ಮೃತಿಯಲ್ಲಿ ಉಳಿಸಿಕೊಳ್ಳುವ ಪರಿಣಾಮಕಾರಿ ವಿಧಾನಗಳು, ಸಮಾಜಶಾಸ್ತ್ರದ ಆಯ್ದ ವಿಷಯಗಳನ್ನು ಸುಲಭವಾಗಿ ನೆನಪಿಟ್ಟುಕೊಳ್ಳಲು ಅನುಸರಿಸಬಹುದಾದ ಅನೇಕ ತಂತ್ರಗಳನ್ನು ವಿವರಿಸಿದರು.  

            ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಆರ್‌. ಎಂ. ಬಂಟನೂರ ರವರು ಮಾತನಾಡುತ್ತಾ ತರಬೇತಿ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದರ ಜೊತೆಗೆ ಯಶಸ್ಸಿನ ದಾರಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿದರು.  ಐಕ್ಯೂಎಸಿ ಸಂಯೋಜಕರಾದ ಪ್ರೊ. ಯು. ಎನ್‌. ಮಂಗೊಂಡ ಹಾಗೂ ಕೌಶಲ್ಯಾಭಿವೃದ್ಧಿ ಘಟಕದ ಸಂಯೋಜಕರಾದ ಪ್ರೊ. ಸುರೇಶ ಬಡಿಗೇರ ಉಪಸ್ಥಿತರಿದ್ದರು.  

ಸಂತೋಷ್ ಬಿರಾದಾರ ಅವರು ಸ್ವಾಗತ ಹಾಗೂ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಶೋಭಾ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಪ್ರವೀಣ ಅವರು ಪುಷ​‍್ಾರೆ್ಪಣ ನೆರವೇರಿಸಿದರು. ನಿವೇದಿತ ಮಠ ನಿರೂಪಿಸಿದರು. ರೇಷ್ಮಾ ವಂದನಾರೆ​‍್ಣ ಸಲ್ಲಿಸಿದರು. ಕಾರ್ಯಾಗಾರದಲ್ಲಿ ಪ್ರಶಿಕ್ಷಣಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಜ್ಞರಿಂದ ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು. ಮಹಾವಿದ್ಯಾಲಯದ ಸರ್ವ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.