ಗ್ರಾಮ ಆಡಳಿತ ಅಧಿಕಾರಿ ಹಾಗೂ ಪಿ.ಎಸ್‌.ಐ ಹುದ್ದೆಯ ಸ್ಪರ್ಧಾತ್ಮ ಪರೀಕ್ಷೆ

ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ 

ವಿಜಯಪುರ, 27 : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಹಾಗೂ ಪಿ.ಎಸ್‌.ಐ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. 

ಶುಕ್ರವಾರ ನಗರದ ದರಬಾರ ಕಾಲೇಜಿನ ಸಭಾಂಗಣದಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಹಾಗೂ ಪಿ.ಎಸ್‌.ಐ ಸ್ಪರ್ದಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ಸೆಪ್ಟೆಂಬರ್ 29ರ ಭಾನುವಾರಂದು ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ 12 ತಾಲೂಕುಗಳ 93 ಪರೀಕ್ಷೆ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಗೆ ಒಟ್ಟು 38,746 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂದು ಬೆಳಿಗ್ಗೆ 10-30 ಗಂಟೆಗೆಯಿಂದ 12-30ರ ವರೆಗೆ ಪರೀಕ್ಷೆ ಜರುಗಲಿದೆ.    

ಪಿ.ಎಸ್‌.ಐ ಪರೀಕ್ಷೆಯು ಅಕ್ಟೋಬರ್ 3 ರಂದು 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.  ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10-30ರಿಂದ 12-00ರವರೆಗೆ ಪತ್ರಿಕೆ-1 ಹಾಗೂ   ಮಧ್ಯಾಹ್ನ 12-30ರಿಂದ ಮಧ್ಯಾಹ್ನ 2-00 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ. 

ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರೀಶೀಲಿಸಿಕೊಳ್ಳಬೇಕು. ಎಲ್ಲಾ ಸಿಸಿಟಿವಿ ಕ್ಯಾಮಾರಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ  ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಲೋಪ ಕಂಡು ಬಂದಲ್ಲಿ  ತಪ್ಪಿಸ್ಥರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಯಾವುದೇ ಕಾರಣಕ್ಕೂ ತವಗೆ ವಹಿಸಿದ ಕರ್ತವ್ಯಗಳನ್ನು ಚಾಚು ತಪ್ಪದೆ ಕರ್ತವ್ಯ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.   

ಪ್ರತಿ ಅಭ್ಯರ್ಥಿಯ ಮಧ್ಯೆ 2 ಮೀಟರ್ ಅಂತರವಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಪರಿಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‌ಚೇರ-ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್‌ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ  ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತೀನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು.  ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು.  ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಪರೀಕ್ಷ ಕೇಂದ್ರಗಳಲ್ಲಿ ಅಧಿಕೃತವಾಗಿ ನೇಮಕವಾದ ಸಿಬ್ಬಂದಿಗಳಿಗೆ ಮಾತ್ರ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಅವರು ಗುರುತಿನ ಚೀಟಿ ಹೊಂದಿರಬೇಕು ಪರೀಕ್ಷ ದಿನಗಳಂದು ಸರ್ಕಾರದಿಮದ ಮನ್ಯವಾದ ಫೋಟೊ ಗುರುತಿನ ಚೀಟಿಯನ್ನು (ಆಧಾರ ಕಾರ್ಡ್‌, ಪ್ಯಾನ್ ಕಾರ್ಡ್‌, ರೇಶನ್ ಕಾರ್ಡ್‌,ಡ್ರೈವಿಂಗ್ ಲೈಸನ್ಸ್‌, ಮತದಾರರ ಗುರುತಿನ ಚೀಟಿ ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಪಾಸ್)  ಬುಕ್) ತರುವುದು ಕಡ್ಡಾಯ ಎಂದು ಸೂಚಿಸಿ,  ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ  ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.  

ಸಭೆಯಲ್ಲಿ ಜಿ.ಪಂ ಯೋಜನಾ ನಿದೇಶಕರಾದ ಸಿ.ಬಿ ದೇವರನಮಿ, ಜಿ.ಪಂನ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಎಲ್ಲ ತಾಲೂಕಿನ ತಹಶೀಲ್ದಾರರು, ಖಜಾನೆ ಇಲಾಖೆಯ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಡಿ.ಡಿ.ಪಿ.ಐ ಎನ್‌.ಎಚ್ ನಾಗೂರ,  ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನೀರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಪರೀಕ್ಷಾ ಕೇಂದ್ರಗಳ ವೀಕ್ಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.