ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ: ಬೊಮ್ಮನಹಳ್ಳಿ
ಬೆಳಗಾವಿ, 21: ಈ ಬಾರಿಯ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ನೀತಿಸಂಹಿತೆ ಉಲ್ಲಂಘನೆ ಕುರಿತು ಸಾರ್ವಜಿಕರು ಸಿ-ವಿಜ್ಹಿಲ್ಸಿಟಿಜನ್ ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಆಯೋಗದಿಂದ ಈ ಬಾರಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು. ಸಾರ್ವಜನಿಕರು ತಮ್ಮ ಸುತ್ತಮುತ್ತ ನೀತಿ ಸಂಹಿತೆ ಉಲ್ಲಂಘನೆಯ ಕಾರ್ಯಗಳು ನಡೆದರೆ ಈ ಆ್ಯಪ್ ಮೂಲಕ ಫೋಟೋ ಅಥವಾ ವಿಡಿಯೋ ರೆಕಾಡರ್್ ಮಾಡಿ ನೇರವಾಗಿ ದೂರು ಸಲ್ಲಿಸುವ ಅವಕಾಶವಿದೆ. ಅಲ್ಲದೇ ಸಾರ್ವಜನಿಕರು ದೂರು ನೀಡಿದ 100 ನಿಮಿಷಗಳಲ್ಲಿ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಿ-ವಿಜ್ಹಿಲ್ಸಿಟಿಜನ್ ಮೊಬೈಲ್ ಆ್ಯಪ್ ಅನ್ನು ಸಾರ್ವಜನಿಕರು ಸರಿಯಾಗಿ ಬಳಸಿಕೊಂಡು ಚುನಾವಣಾ ಅಕ್ರಮಗಳ ಕುರಿತು ದೂರು ಸಲ್ಲಿಸಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸಲು ಅವಕಾಶ ಮಾಡಿಕೊಡುವಂತೆ ಕರೆ ನೀಡಿದರು.
ಒಟ್ಟಿನಲ್ಲಿ ಚುನಾವಣಾ ಆಯೋಗವು ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ ಎಂದು ಹೇಳಬಹುದು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 