ರಾಜ್ಯಾಧ್ಯಕ್ಷರ ವಿರುದ್ಧ ದೂರು: ಕ್ರಮಕ್ಕೆ ಪತ್ರಕರ್ತರ ಸಂಘ ಆಗ್ರಹ
Complaint against State President: Journalists' association demands action
ಲೋಕದರ್ಶನ ವರದಿ
ಸಿಂದಗಿ 09: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ದೂರು ನೀಡಿರುವುದನ್ನು ಖಂಡಿಸಿರುವ ಸಂಘದ ಸಿಂದಗಿ ತಾಲೂಕು ಘಟಕದ ಪದಾಧಿಕಾರಿಗಳು, ಬಂಗೇಲಿ ಮಲ್ಲಿಕಾರ್ಜುನ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಹಶೀಲ್ದಾರ್ ಕಚೇರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ರಾಜ್ಯಾಧ್ಯಕ್ಷರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ದೂರು ನೀಡಲಾಗಿದೆ. ಪತ್ರಕರ್ತರ ಸಂಘದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಇಂತಹ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲಿಕಾರ್ಜುನ ಅಲ್ಲಾಪುರ ಮಾತನಾಡಿ, ಬಂಗೇಲಿ ಮಲ್ಲಿಕಾರ್ಜುನ ಅವರು ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರುಗುಪ್ಪದಲ್ಲಿಯೂ ಪ್ರಕರಣ ದಾಖಲಾಗಿದ್ದು, ಬಳಿಕ ಅವರು ಊರು ತೊರೆದಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಪ್ರಕರಣದಿಂದ ಪಾರಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ ಎಂದು ಹೇಳಿದರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಚುನಾಯಿತರಾಗಿ ಪತ್ರಕರ್ತರ ಹಿತಾಸಕ್ತಿ, ವೃತ್ತಿ ಭದ್ರತೆ ಹಾಗೂ ಸಂಘದ ಶ್ರೇಯೋಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ವೈಯಕ್ತಿಕ ದ್ವೇಷದಿಂದ ಅಥವಾ ಸಂಘದ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಆಧಾರರಹಿತ ದೂರುಗಳನ್ನು ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಬಂಗೇಲಿ ಮಲ್ಲಿಕಾರ್ಜುನ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಮಾಜಿ ಅಧ್ಯಕ್ಷ ಆನಂದ ಶಾಬಾದಿ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಶೇಖ್, ಉಪಾಧ್ಯಕ್ಷ ಭೀಮಣ್ಣ ಕೆಂಭಾವಿ, ಕಾರ್ಯದರ್ಶಿ ನವೀನ ಶೇಳ್ಳಗಿ, ಕಾರ್ಯಕಾರಿ ಸದಸ್ಯ ವಿನಾಯಕ ಅಗಸರ, ಸಿದ್ದು ಕಡಗಂಚಿ, ರಾಕೇಶ ಕಂಟಿಗೊಂಡ, ಶಿವಾನಂದ ಆಲಮೇಲ, ಗುಂಡು ಕುಲಕರ್ಣಿ, ಗುರುರಾಜ ಮಠ, ಸುದರ್ಶನ ಜಂಗಣ್ಣಿ, ಶಾಂತವೀರ ಹಿರೇಮಠ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 