ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಸಕಾಲದಲ್ಲಿ ಪೂರ್ಣಗೊಳಿಸಿ: ಶಾಸಕ ರಾಜುಗೌಡ
Complete Ganga Kalyan Yojana facilities on time: MLA Rajugowda
ದೇವರಹಿಪ್ಪರಗಿ 11: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ನಾನಾ ನಿಗಮಗಳಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ತ್ವರಿತವಾಗಿ ಬೋರ್ ವೆಲ್ ಕೊರೆದು ವಿದ್ಯುತ್ ಸಂಪರ್ಕ ಮತ್ತು ಪಂಪಸೇಟ್ ಸಾಮಗ್ರಿಗಳನ್ನು ಪೂರೈಸಲು ಅಗತ್ಯ ಹಾಗೂ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಸರ್ಕಾರಕ್ಕೆ ಒತ್ತಾಯಿಸಿದರು.
ಬಜೆಟ್ ಅಧಿವೇಶನದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಯೋಜನೆಯಡಿ ಗಂಗಾ ಕಲ್ಯಾಣದ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಚುಕ್ಕೆ ಗುರುತಿನ ಸಂಖ್ಯೆ-1063 ಪ್ರಶ್ನೆಗೆ ಸಚಿವರು ಸರಿಯಾದ ಉತ್ತರ ನೀಡದ ಕಾರಣ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ಮತಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತಂದು ಗಂಗಾ ಕಲ್ಯಾಣ ಯೋಜನೆಗಳನ್ನು ತ್ವರಿತವಾಗಿ ಕ್ರಮ ಕೈಗೊಳ್ಳಲು ತಿಳಿಸುವ ಮೂಲಕ ರಾಜ್ಯದ ರೈತಾಪಿ ವರ್ಗದ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆದ ಕಾರಣ ರೈತರ ಪ್ರೀತಿಗೆ ಪಾತ್ರರಾದರು.
ಇಲಾಖೆಯಿಂದ ಕ್ಷೇತ್ರಕ್ಕೆ ಸಾಕಷ್ಟು ಕೊಳವೆ ಬಾವಿಗಳನ್ನು ಕೊರಿಸಲಾಗಿದ್ದು ಹಾಗೂ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ವಿವಿಧ ನಿಗಮಗಳ ಮೂಲಕ ಗಂಗಾ ಕಲ್ಯಾಣ ಯೋಜನೆಯಡಿ ಮಂಜೂರಾದ ಕೊಳವೆ ಬಾವಿಗಳನ್ನು 6.5 ಇಂಚ್ ಅಗಲ ಕೊರಿಸಲಾಗಿದ್ದು, ಇನ್ನರ್ ಕೇಸ್ಸಿಂಗ್ ಮಾಡದೆ ಕೊಳವೆ ಬಾವಿಗಳು ಮುಚ್ಚಿ ಹೋಗಿವೆ ಆದಕಾರಣ ಸರ್ಕಾರ ಅನುದಾನವನ್ನು ಹೆಚ್ಚಿಸಿ ರೈತರ ಅನುಕೂಲಕ್ಕಾಗಿ 7.5 ಇಂಚ್ ಕೊಳವೆ ಬಾವಿ ಕೊರೆಯಿಸಿದರೆ ರೈತರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ ಹಾಗೂ ತ್ವರಿತಗತಿಯಲ್ಲಿ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಜೊತೆ ಪಂಪ್ ಸೆಟ್ ಸಾಮಗ್ರಿಗಳನ್ನು ಪೂರೈಸಲು ತ್ವರಿತ ಕ್ರಮ ವಹಿಸಬೇಕು ಎಂದು ಸಚಿವರಲ್ಲಿ ಕೋರಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 