ತಿಂಗಳೊಳಗಾಗಿ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಪೂರ್ಣಗೊಳಿಸಿ ಡಿಸಿ ಸೂಚನೆ

ಹಾವೇರಿ: ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ಕಾಮಗಾರಿಗಳನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇಲಾಖಾ  ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಡಿ ಅಲ್ಪಸಂಖ್ಯಾತ ವರ್ಗಕ್ಕೆ ಕಲ್ಪಿಸಿರುವ ಸೌಕರ್ಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಗಂಗಾಕಲ್ಯಾಣದಡಿ ಬಾಕಿ ಉಳಿದಿರುವ 113 ಕೊಳವೆಬಾವಿಗಳಿಗೆ ನಿಗಧಿತ ಶುಲ್ಕ ಪಾವತಿಸಿ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಉದರ್ು ಶಾಲೆಗಳಿಗೆ ಹಾಗೂ ಮೌಲಾನಾ ಆಜಾದ್ ಶಾಲೆಗಳಿಗೆ ಬೇಕಾಗಿರುವ ನಿವೇಶನ ಕುರಿತಂತೆ ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ  ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕರು ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ 70 ಉದರ್ು ಶಾಲಾ ಕೊಠಡಿಗಳು ಕಳೆದ ಸಾಲಿನಲ್ಲಿ ಮಂಜೂರಾಗಿದ್ದು, ಈ ಪೈಕಿ 64 ಕೊಠಡಿಗಳು ಪೂರ್ಣಗೊಂಡಿವೆ. ಉಳಿದ ಆರು ಕೊಠಡಿಗಳಿಗೆ ನಿವೇಶನ ಸಮಸ್ಯೆ ಇದೆ.  14 ಮೌಲಾನಾ ಆಜಾದ್ ಶಾಲೆಗಳಿಗೆ ಕೊಠಡಿ ನಿಮರ್ಾಣಕ್ಕೆ ಮಂಜೂರಾಗಿದ್ದು, ಈ ಪೈಕಿ ಎರಡು ಶಾಲೆಗಳ ಕೊಠಡಿಗಳ ನಿಮರ್ಾಣಕ್ಕೆ ನಿವೇಶನ ಸಮಸ್ಯೆ ಎದುರಾಗಿರುವ ಕುರಿತಂತೆ ಸಭೆಯ ಗಮನಸೆಳೆದರು.

ಅಂಗನವಾಡಿಯಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವರ್ಗದ ಮಕ್ಕಳ ಪೈಕಿ ಅಪೌಷ್ಠಿಕತೆ ಎದುರಿಸುತ್ತಿರುವ ಮಕ್ಕಳಿಗೆ ಮೊಟ್ಟೆ, ಹಾಲು ಸೇರಿದಂತೆ ಪೌಷ್ಠಿಕ ಆಹಾರ ನೀಡಲು ಕ್ರಮ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ವ ಉದ್ಯೋಗ ಒಳಗೊಂಡಂತೆ ಸಕರ್ಾರದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಯೋಜನೆಯಡಿ ಅಜರ್ಿ ಸಲ್ಲಿಸಿದ ಅಲ್ಪಸಂಖ್ಯಾತ ವರ್ಗಗಳಿಗೆ ಯಾವುದೇ ವಿಳಂಬ ಮತ್ತು ಸಕಾರಣವಿಲ್ಲದೆ ಬ್ಯಾಂಕ್ಗಳು ಸಾಲ ನಿಕಾರಕರಿಸಿದ ನಿಧರ್ಿಷ್ಟ ಪ್ರಸಂಗವಿದ್ದರೆ ನನ್ನ ಗಮನಕ್ಕೆ ತನ್ನಿ. .

ವಿವಿಧ ಗ್ರಾಮೀಣ ವಸತಿ ಯೋಜನೆಯಡಿ 183 ಮನೆಗಳ ನಿಮರ್ಾಣ ಗುರಿ ಹೊಂದಲಾಗಿದೆ.  ಅಲ್ಪಸಂಖ್ಯಾತ ವರ್ಗದವರು ಹೆಚ್ಚಾಗಿರುವ ಸವಣೂರ ತಾಲೂಕಿಗೆ ಹೆಚ್ಚುವರಿ ಮನೆ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಹೊರತುಪಡಿಸಿ ಅಲ್ಪಸಂಖ್ಯಾತ ವರ್ಗಕ್ಕೆ ಹೆಚ್ಚುವರಿಯಾಗಿ ಮನೆಗಳ ಅವಶ್ಯಕತೆ ಇದ್ದರೆ ವರದಿ ತರಿಸಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ತಿಳಿಸಿದರು.

       ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಯಡಿ ಅಲ್ಪಸಂಖ್ಯಾತ ವರ್ಗದವರಿಗೆ ಸಕರ್ಾರದ ಸೌಲಭ್ಯಗಳ ಕುರಿತಂತೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

        ಮೀನುಗಾರಿಕೆ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವರ್ಗಕ್ಕೆ ಮೀನುಗಾರಿಕೆಗಾಗಿ ಪಾಂಡ್ಗಳ ನಿಮರ್ಾಣಕ್ಕೆ ಹಣಕಾಸಿನ ನೆರವು ಹಾಗೂ ನಗರದಲ್ಲಿ ಮೀನು ಮಾರುಕಟ್ಟೆ ನಿಮರ್ಿಸಲು ನಿವೇಶನ ಕುರಿತಂತೆ ಪ್ರಸ್ತಾವನೆಯನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಸೂಚನೆ ನೀಡಿದರು.

  ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಕುರಿತಂತೆ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಸ್ಪಧರ್ಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಉದ್ಯೋಗ ಮೇಳ ಆಯೋಜಿಸಬೇಕು. ಈ ಕುರಿತಂತೆ ವ್ಯಾಪಕ ಪ್ರಚಾರ ನೀಡುವಂತೆ ಉದ್ಯೋಗ ವಿನಿಮಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ವಕ್ಫ್ ಆಸ್ತಿಗಳ ಸವರ್ೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಕ್ಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ ಅವರು ಮಾತನಾಡಿ, ಕೋಮು ಸಾಮರಸ್ಯ, ಕಾನೂನು ಸುವ್ಯವಸ್ಥೆಗೆ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸೂಕ್ಷ್ಮ ಸಂದರ್ಭದಲ್ಲಿ ಶಾಂತಿ ಸಭೆನಡೆಸಿ ಸಮಸ್ಯೆಗೆ ಸ್ಪಂದಿಸಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪಕರ್ಿಸಿ ಅಥವಾ ಪೊಲೀಸ್ ಸಹಾಯವಾಣಿ 24 ತಾಸು ಕಾರ್ಯನಿರ್ವಹಿಸುತ್ತಿದೆ. ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವುದಾಗಿ ತಿಳಿಸಿದರು.

       ಸಭೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಆರ್.ವಾಸಣ್ಣ, ಕೃಷಿ ಇಲಾಖೆ ಜಂಟಿ ನಿದರ್ೆಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿದರ್ೆಶಕ ಶರಣಬಸಪ್ಪ ಭೋಗಿ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಣಾಧಿಕಾರಿಗಳು, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.