ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಸಿಇಓ ಗಜಾನನ ಬಾಲೆ ಸೂಚನೆ
Complete the work within the stipulated time: CEO Gajanana Bale's instruction
ಲೋಕದರ್ಶನ ವರದಿ
ಬಾಗಲಕೋಟೆ 04: ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಅಭಿವೃದ್ದಿ ಕಾಮಗಾರಿಗಳ ಸ್ಥಳಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಶನಿವಾರ ಭೇಟಿ ನೀಡಿ ಪರೀಶೀಲನೆ ನಡೆಸಿದು. ಜಮಖಂಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು, ಜಲ ಜೀವನ್ ಮಿಷನ್, ಆರೋಗ್ಯ, ಶಿಕ್ಷಣ, ಗ್ರಾಮ ಪಂಚಾಯತ್ ಆಡಳಿತ ಹಾಗೂ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮಗಳ ಪ್ರಗತಿಯನ್ನು ಪರೀಶೀಲಿಸಿದರು. ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಅಗತ್ಯಗಳಿಗೆ ಅನುಗುಣವಾಗಿ ಯೋಜನೆಗಳನ್ನು ಸಮರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದರು. ಹೊನ್ನೂರು ಗ್ರಾಮದಲ್ಲಿ ಡಿಬಿಓಟಿ ಸ್ಕೀಮ್-1 ಅಡಿಯಲ್ಲಿ ನಿರ್ಮಾಣ ಹಂತದಲ್ಲಿರುವ 325 ಕೆ.ಎಲ್. ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ಕಾಮಗಾರಿ, ರಾಮತೀರ್ಥ ಕೆರೆ, ಕೊಳವೆಬಾವಿ, ಹುನ್ನೂರು ಕೆರೆ ಹಾಗೂ ಹುನ್ನೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ, ಗ್ರಾಮ ಪಂಚಾಯತ್ ಆಡಳಿತ ಹಾಗೂ ತೆರಿಗೆ ವಸೂಲಾತಿ ಪ್ರಗತಿಯನ್ನು ಪರೀಶೀಲಿಸಿದರು. ತೆರಿಗೆ ವಸೂಲಾತಿಯನ್ನುತ್ವರಿತಗೊಳಿಸಿ, ನಿಗದಿತ ಗುರಿಯನ್ನು ಕಡ್ಡಾಯವಾಗಿ ಸಾಧಿಸಬೇಕು. ತೆರಿಗೆ ವಸೂಲಾತಿ ಗುರಿ ಸಾಧಿಸಲು ವಿಫಲವಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹುನೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಸಲಹೆಗಳನ್ನು ನೀಡಿದರು. ಮತದಾರರ ಮಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಎರಡು ಮನೆಗಳಿಗೆ ಭೇಟಿ ನೀಡಿ ಮತದಾರರ ಪರಿಷ್ಕರಣೆ ಹಿನ್ನಲೆಯಲ್ಲಿ ಎನ್ಯೂಮಿನೇಷನ್ ಫಾರಂ ವಿತರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಬಳಿಕ ಹಿಪ್ಪರಗಿ ಬ್ಯಾರೇಜ್, ಪಿಎಂ ಶ್ರೀ ಸರ್ಕಾರಿ ಪ್ರಾಥಮಿಕ ಶಾಲೆ, ಆಃಓಖಿ ಖಛಿಜಟಜ-01 ಅಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ಇಂಟೇಕ್ ಜಾಕ್ವೆಲ್, ಜಲ ಜೀವನ್ ಮಿಷನ್ ಕಾಮಗಾರಿಗಳು ಹಾಗೂ ಹಿಪ್ಪರಗಿ ನೀರು ಶುದ್ಧೀಕರಣ ಘಟಕ ಕಾಮಗಾರಿಗಳನ್ನು ಪರೀಶೀಲಿಸಿ, ಗುಣಮಟ್ಟ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 