ಲೋಕದರ್ಶನ ವರದಿ
ಕಂಪ್ಲಿ 26: ಗ್ರಾಮದಲ್ಲಿ ಅಲ್ಲಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು ಮನೆಯಮುಂದೆ ಸ್ವಚ್ಚತೆ ಕಾಪಾಡಿಕೊಳ್ಳುವಲ್ಲಿ ಗ್ರಾಮಸ್ಥರು ಮುಂದಾಗಬೇಕು ಎಂದು ಮೆಟ್ರಿಯ ಆರೋಗ್ಯ ಉಪಕೇಂದ್ರದ ಕಿರಿಯ ಆರೋಗ್ಯ ಸಹಾಯಕ ಕೆ.ಯರಿಸ್ವಾಮಿ ಹೇಳಿದರು.
ತಾಲ್ಲೂಕಿನ ಮೆಟ್ರಿ ಗ್ರಾಮದ ಹುಲಿಗೆಮ್ಮ ದೇವಸ್ಥಾನ ಬಳಿಯ ನಿವಾಸಿ 8ನೇ ತರಗತಿ ವಿದ್ಯಾಥರ್ಿ ತಿಪ್ಪೇಸ್ವಾಮಿ ನಾಗಲಿಂಗಯ್ಯ(14)ಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ತಿಪ್ಪೆಸ್ವಾಮಿಯನ್ನು ಬಳ್ಳಾರಿ ವಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಗ್ರಾಮಕ್ಕೆ ಮರಳಿದ್ದಾನೆ. ನಿತ್ಯ ರೋಗಿಯ ಆರೋಗ್ಯ ಕುರಿತು ತೀವ್ರ ನಿಗಾವಹಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿಸಿದರು.
ಗ್ರಾಮದಲ್ಲಿ ಡೆಂಗ್ಯೂ ಜ್ವರ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಚೇರಿ ಆಶ್ರಯದಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿ ಜಿಲ್ಲಾ ಕಚೇರಿಯ ಮೇಲ್ವಿಚಾರಕ ಮಲ್ಲಪ್ಪ ಮಾತನಾಡಿ, ಯಾರಿಗಾದರೂ ತೀವ್ರ ಜ್ವರ, ಕಣ್ಣಿನ ಹಿಂಭಾಗದಲ್ಲಿ ನೋವು, ರಕ್ತಸ್ರಾವ, ತಲೆ ನೋವು, ಕಾಣಿಸಿಕೊಂಡಲ್ಲಿ ಕೂಡಲೇ, ಸಕರ್ಾರಿ ಆಸ್ಪತ್ರೆಗೆ ಸೂಕ್ತ ಚಿಕಿತ್ಸೆ ಪಡೆಯಬೇಕಾಗಿದೆ. ಅಲ್ಲದೆ, ಸೊಳ್ಳೆಗಳ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಈ ದಿಸೆಯಲ್ಲಿ ಸಂಜೆ ಸಮಯದಲ್ಲಿ ಬೇವಿನ ಸೊಪ್ಪಿನ ಹೊಗೆಯನ್ನು ಹಾಕುವಂತೆ, ಕಿಟಕಿ ಬಾಗಿಲುಗಳಿಗೆ ಸೊಳ್ಳೆ ಪರದೆ ಅಳವಡಿಸುವಂತೆ, ಮನೆ ಸುತ್ತಲೂ ನೀರು ನಿಲ್ಲದಂತೆ ಜಾಗೃತಿವಹಿಸುವಂತೆ ಸೇರಿ ನಾನಾ ಸಲಹೆ ಸೂಚನೆಗಳನ್ನು ನೀಡಿದರು.
ತಾಲ್ಲೂಕು ಕಚೇರಿಯ ಮೇಲ್ವಿಚಾರಕ ಚನ್ನಬಸಪ್ಪ ಮಾತನಾಡಿ, ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಸೊಳ್ಳೆಗಳ ನಿಮರ್ೂಲನೆ ಮಾಡಬೇಕಾಗಿದೆ. ಇದಕ್ಕಾಗಿ ಪ್ರತಿದಿನ ಲಾರ್ವ ಸಮೀಕ್ಷೆ ನಡೆಸಿ ನಾಶಪಡಿಸುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಿದರು. ಗ್ರಾಮದ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳುವಂತೆ ಗ್ರಾಮ ಪಂಚಾಯ್ತಿಗೆ ಆರೋಗ್ಯ ಇಲಾಖೆ ಮನವಿ ಸಲ್ಲಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಉಪ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸಕ್ಕೂಬಾಯಿ, ಆಶಾ ಕಾರ್ಯಕತರ್ೆಯರು, ನಾಗರಿಕರು ಉಪಸ್ಥಿತರಿದ್ದರು.