ಕಂಪ್ಲಿ ಉತ್ಸವ: ಡಿಜಿಟಿಲ್ ಪ್ರಚಾರ ವಾಹನಕ್ಕೆ
Compli Utsav: A digital promotional vehicle
ಕಂಪ್ಲಿ 08 : ಎರಡು ದಿನದ ಕಂಪ್ಲಿ ಉತ್ಸವ ಹಿನ್ನಲೆ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರಚಾರಪಡಿಸುವ ಡಿಜಿಟಲ್ ಪ್ರಚಾರ ವಾಹನಕ್ಕೆ ಶಾಸಕ ಜೆ.ಎನ್.ಗಣೇಶ್ ಇವರು ಶುಕ್ರವಾರ ಪಟ್ಟಣದ ಪುರಸಭೆಯಲ್ಲಿ ಚಾಲನೆ ನೀಡಿದರು. ನಂತರ ಶಾಸಕ ಗಣೇಶ್ ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ಆಳಿದ ಅಂದಿನ ಕಂಪಲಿರಾಯ(ಗಂಡುಗಲಿಕುಮಾರ)ನ ಸಾಮ್ರಾಜ್ಯದ ವೈಭವ ಸಾರುವ ಜೊತೆಗೆ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಮರುಕರಿಳಿಸುವಂತೆ ಮಾಡುವ ಹಿನ್ನಲೆ ಕಂಪ್ಲಿ ಉತ್ಸವ ನಡೆಸಲಾಗುತ್ತಿದೆ. ಎರಡನೇ ಬಾರಿಗೆ ಕಂಪ್ಲಿ ಉತ್ಸವವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದೆ.
ಇದರಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಉತ್ಸವದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿಜಿಟಲ್ ವಾಹನಕ್ಕೆ ನೀಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಲು ಸಾಧ್ಯ. ಕಂಪ್ಲಿ ಉತ್ಸವ ಜನೋತ್ಸವವಾಗಬೇಕೆಂಬ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಜೂಗಲ್ ಮಂಜುನಾಯಕ, ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ, ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಮುಖಂಡರಾದ ಬಿ.ಸಿದ್ದಪ್ಪ, ಲೊಡ್ಡು ಹೊನ್ನೂರವಲಿ, ಜಾಫರ್, ಆರ್.ಪಿ.ಶಶಿಕುಮಾರ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 