ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಕಂಪ್ಲಿ ಪೊಲೀಸರು
Complimentary police succeed in arresting murder suspect
ಕಂಪ್ಲಿ ; 20: ಕಂಪ್ಲಿ ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಅಂಗಳದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇ.15ರ ರಾತ್ರಿ ಸಮಯದಲ್ಲಿ ಆಂದ್ರ್ರದೇಶದ ನದಿಚಾಗಿ ಗ್ರಾಮದ ದೊಡ್ಡ ಬಸವನಗೌಡ ಇವರನ್ನು ಆರೋಪಿಗಳು ಬರ್ಬರವಾಗಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದರು. ಆದರೆ, ಕಂಪ್ಲಿ ಠಾಣೆಯಲ್ಲಿ ಸಂಬಂಧಿಕರಾದ ಚನ್ನಬಸಪ್ಪ ಇವರು ದೂರು ನೀಡಿದ ಹಿನ್ನಲೆ ನಂತರ ಎಸ್ಪಿ ಡಾ.ಶೋಭಾ ರಾಣಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿಕುಮಾರ ಅವರ ಮುಂದಾಳತ್ವದಲ್ಲಿ ತಂಡ ರಚಿಸಿ, ಕಂಪ್ಲಿ ನಗರದ ಆರೋಪಿ ರಾಜಶೇಖರ(19) ಮತ್ತು ಪ್ರಾಯ ಬಾಲಕನನ್ನು ಬಂಧಿಸಿದ್ದಾರೆ.
ಡಿವೈಎಸ್‌ಪಿ ಪ್ರಸಾದ್ ಗೋಖುಲೆ, ಪಿಐ ಕೆ.ಬಿ.ವಾಸುಕುಮಾರ, ಪಿಎಸ್‌ಐ ಅವಿನಾಶ ಕಾಂಬ್ಳೆ, ಎಎಸ್‌ಐ ಬಸವರಾಜ, ಸಿಬ್ಬಂದಿಗಳಾದ ಬಸವರಾಜ ಹಿರೇಮಠ, ರಮೇಶ, ಮಲ್ಲೇಶ ರಾಥೋಡ್, ಸತ್ಯನಾರಾಯಣ, ಸುರೇಶ, ಮುತ್ತುರಾಜ್, ಗಾದಿಲಿಂಗಪ್ಪ, ವಿಶ್ವನಾಥ, ಪ್ರಭಾಕರ, ತಿಮ್ಮಯ್ಯ ಇವರು ಆರೋಪಿಗಳನ್ನು ಪತ್ತೆ ಹಚ್ಚುವ ಮೂಲಕ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 