ಕಂಪ್ಲಿಗೆ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೇರ್ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕಂಪ್ಲಿ 05: ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಪಂ, ಗ್ರಾಪಂ ಸಹಯೋಗದಲ್ಲಿ ಆಯೋಜಿಸಿರುವ ಕೂಸಿನ ಮನೆ ತರಬೇತಿ ಕೇಂದ್ರಕ್ಕೆ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಬುಧವಾರ ಭೇಟಿ ನೀಡಿ, ಪರೀಶೀಲಿಸಿದರು. ನಂತರ ಸಿಇಒ ಅವರು ಪತ್ರಕರ್ತರೊಂದಿಗೆ ಮಾತನಾಡಿ, ತಾಪಂ ಮಟ್ಟದಲ್ಲಿ ಪ್ರತಿಯೊಂದು ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಪಟ್ಟಣ, ಗ್ರಾಮೀಣ ಪ್ರದೇಶದಲ್ಲಿ ಜನತೆಗೆ ಮೂಲಭೂತ ಸೌಕರ್ಯಗಳನ್ನು ಸಮರ್ಕವಾಗಿ ಕಲ್ಪಿಸುವ ನಿಟ್ಟಿನಲ್ಲಿ ಜಾಗೃತಿವಹಿಸಬೇಕು. ರಸ್ತೆ, ಕುಡಿಯುವ ನೀರು, ಬೀದೀದೀಪ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸಿದಾಗ ಮಾತ್ರ ನಮ್ಮ ಸೇವೆಗೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಕೆಲಸ ಮಾಡುವ ವಿಶ್ವಾಸವಿದೆ. ಮೊದಲ ಬಾರಿಗೆ ಕಂಪ್ಲಿ ಕಡೆಗೆ ಭೇಟಿ ನೀಡಿದಾಗ ದೇವಲಾಪುರ ಗ್ರಾಪಂಯ ಸೋಮಲಾಪುರದ ರಸ್ತೆ ಪರೀಶೀಲಿಸಲಾಯಿತು. ನಂತರ ಕಂಪ್ಲಿಯ ಮಿನಿವಿಧಾನಸೌಧದ ಬಳಿಯಲ್ಲಿ ನಡೆಯುತ್ತಿರುವ ತಾಪಂಯ ಕಟ್ಟಡ ಕಾಮಗಾರಿ ಪರೀಶೀಲಿಸಲಾಗಿದೆ ಎಂದರು. ನಂತರ ಇಲ್ಲಿನ ಕೂರಿನ ಮನೆ ತರಬೇತಿ ಕೇಂದ್ರದಲ್ಲಿ ತಾಪಂ, ಗ್ರಾಪಂ ಅಧಿಕಾರಿಗಳೊಂದಿಗೆ ಕಂಪ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವ ಜತೆಗೆ ಮುಂದಿನ ದಿನದಲ್ಲಿ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ.ಶ್ರೀಕುಮಾರ, ನರೇಗಾ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.