ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026: ಬಿಎಲ್ಒಗಳಿಗೆ ಇ-ಸಿ ಪತ್ರ ವಿತರಣೆ ಸೂಚನೆ
Comprehensive Revision of Electoral Rolls-2026: Instructions to Issue E-C Letters to BLOs
ಹಾವೇರಿ 24: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ 2002ರ ವಿವರಗಳಿಲ್ಲದಿದ್ದರೂ ಬಿಎಲ್ಒಗಳು (ಮತಗಟ್ಟೆ ಮಟ್ಟದ ಅಧಿಕಾರಿಗಳು) ಎನ್ಯೂಮರೇಷನ್ ನಮೂನೆಯನ್ನು ಸಹಿ ಮಾಡಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ಶುಕ್ರವಾರ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಕಾರ್ಯ ಚುರುಕಾಗಿ ನಡೆಯುತ್ತಿದ್ದು, ಶೇ.100ರಷ್ಟು ಎನ್ಯೂಮರೇಷನ್ ನಮೂನೆಗಳನ್ನು ವಿತರಿಸಲಾಗಿದೆ. ಈಗಾಗಲೇ ಶೇ.87.09ರಷ್ಟು ಗಣಕೀಕರಣ ಪೂರ್ಣಗೊಂಡಿದ್ದು, ರಾಜ್ಯದಲ್ಲಿಯೇ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.
ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಲಾಗುತ್ತಿದೆ. ಮತದಾರರು ಎನ್ಯೂಮರೇಷನ್ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸದಿದ್ದರೆ ಆಗಸ್ಟ್ 8ರಂದು ಪ್ರಕಟಿಸಲಾಗುವ ಕರಡು ಮತದಾರರ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಳ್ಳುತ್ತದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಚುನಾವಣಾ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಕ್ಷೇತ್ರವಾರು ಮತದಾರರ ಪಟ್ಟಿ ಪರೀಶೀಲನೆ
ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಮತಗಟ್ಟೆವಾರು ಮತದಾರರ ಪಟ್ಟಿಗಳನ್ನು ಮುದ್ರಿಸಲಾಗಿದ್ದು, ಅವುಗಳನ್ನು ಬಿಎಲ್ಒಗಳಿಗೆ ವಿತರಿಸಲಾಗಿದೆ. ಪಟ್ಟಿಯಲ್ಲಿ ಸ್ಥಳಾಂತರ, ಗೈರು, ಮರಣ, ವಲಸೆ ಹಾಗೂ ದ್ವಿಪ್ರತಿ ಮತದಾರರ ಕುರಿತು ಪರೀಶೀಲನೆ ನಡೆಸಲಾಗುತ್ತಿದೆ. ಸಣ್ಣಪುಟ್ಟ ದೋಷಗಳಿದ್ದಲ್ಲಿ ಸರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಎನ್ಯೂಮರೇಷನ್ ನಮೂನೆಯಲ್ಲಿ ಕುಟುಂಬ ಸದಸ್ಯರ ಸಹಿ, ಭಾವಚಿತ್ರ ಹಾಗೂ ಮ್ಯಾಪಿಂಗ್ ಪರೀಶೀಲನೆ ನಡೆಯಲಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಸೇರೆ್ಡ, ತಿದ್ದುಪಡಿ ಹಾಗೂ ಸ್ಥಳಾಂತರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಎಸ್ಐಆರ್ ಕಾರ್ಯಕ್ಕೆ ರಾಜಕೀಯ ಪಕ್ಷಗಳ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 