ಸಂಚಾರ ಸುಗಮಕ್ಕೆ ಸಮಗ್ರ ಕ್ರಮ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ಸೂಚನೆ
Comprehensive measures for smooth traffic flow: Deputy Commissioner Nagendra Prasad K. instructs off
ಲೋಕದರ್ಶನ ವರದಿ
ಬಳ್ಳಾರಿ, ಆ.3: ನಗರದ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಕೆ. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರದಿಂದ ಉಂಟಾಗುತ್ತಿರುವ ದಟ್ಟಣೆಯನ್ನು ಕಡಿಮೆ ಮಾಡಲು ಚೆಕ್ಪೋಸ್ಟ್ಗಳು ಹಾಗೂ ಬೈಪಾಸ್ ರಸ್ತೆಗಳ ಮೂಲಕ ವಾಹನಗಳನ್ನು ಮಾರ್ಗ ಬದಲಾವಣೆ ಮಾಡುವಂತೆ ಸೂಚಿಸಿದರು. ಹೊಸಪೇಟೆ ಬೈಪಾಸ್ ಸುತ್ತಮುತ್ತಲಿನ ಸರ್ವಿಸ್ ರಸ್ತೆಗಳ ಮೂಲಕ ಭಾರಿ ವಾಹನಗಳನ್ನು ತಿರುಗಿಸಿ ನಗರದೊಳಗಿನ ಟ್ರಾಫಿಕ್ ಒತ್ತಡ ತಗ್ಗಿಸುವ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 