ಜೂನ್ 30 ರಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ನಡೆಯಲಿದೆ; ಸ್ನೇಹಲ್ ಆರ್‌

ಜೂನ್ 30 ರಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ನಡೆಯಲಿದೆ; ಸ್ನೇಹಲ್ ಆರ್‌ Comprehensive revision of voter list to be done from June 30; Snehal R

ಲೋಕದರ್ಶನ ವರದಿ 

ಧಾರವಾಡ ಮೇ 20: ಭಾರತ ಚುನಾವಣಾ ಆಯೋಗದ ಪ್ರಕಟಣೆ ಅನುಸಾರ ಜಿಲ್ಲೆಯಲ್ಲಿ ಜೂನ್ 30 ರಿಂದ ಅಕ್ಟೋಬರ್ 07 ವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಜರುಗಲಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಸುವ್ಯವಸ್ಥಿತವಾಗಿ ಜರುಗಿಸಲು ಜಿಲ್ಲಾಡಳಿತಕ್ಕೆ ಜಿಲ್ಲೆಯ ಸಾರ್ವಜನಿಕರು, ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್‌. ಅವರು ತಿಳಿಸಿದ್ದಾರೆ.  

ಅವರು ಇಂದು (ಮೇ.20) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026  ನೇದ್ದನ್ನು ಕೈಗೊಳ್ಳುವ ಕುರಿತು ಭಾರತ ಚುನಾವಣಾ ಆಯೋಗ ಹೊರಡಿಸಿರುವ ವೇಳಾ ಪಟ್ಟಿ ನಿಮಿತ್ಯ  ಪತ್ರಿಕಾಗೋಷ್ಠಿ ಜರುಗಿಸಿ, ಮಾತನಾಡಿದರು.  ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಯಶಸ್ವಿಯಾಗಲು ಎಲ್ಲರ ಸಹಕಾರ ಮುಖ್ಯ. ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯವು ಶೇ. 89.94 ರಷ್ಟು ಆಗಿದ್ದು, ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಮ್ಯಾಪಿಂಗ್ ಕಾರ್ಯವನ್ನು ಶೇ. 100 ರಷ್ಟು ಸಾಧಿಸುವ ಗುರಿ ಹೊಂದಲಾಗಿದೆ. ಮತಗಟ್ಟೆ ಮಟ್ಟದ ಏಜೆಂಟರು (ಬಿಎಲ್‌ಎ) ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಕ್ಷೇತ್ರಮಟ್ಟದಲ್ಲಿ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.