ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ : ಎಚ್.ಎನ್.ಬಾವಿಕಟ್ಟಿ
Computer Knowledge is Necessary for Everyone : H.N. Bavikatti
ಬೆಟಗೇರಿ 29: ಇಂದಿನ ಯುಗದಲ್ಲಿ ಗಣಕಯಂತ್ರಗಳ ಪಾತ್ರ ಬಹಳ ಮುಖ್ಯವಾಗಿದೆ. ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಳೀಯ ಗ್ರಾಪಂ ಕಾರ್ಯಾಲಯದ ಸಭಾಭುವನದಲ್ಲಿ ಇತ್ತೀಚೆಗೆ ನಡೆದ ಗಣಕಯಂತ್ರ ಪಿತಾಮಹ ಚಾಲ್ಸ್ ಬ್ಯಾಬೇಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಂಪ್ಯೂಟರ್ ಅಪರೇಟರ್ ದಿನಾಚರಣೆ ನಿಮಿತ್ಯ ಸ್ಥಳೀಯ ಗ್ರಾಪಂ ಕಂಪ್ಯೂಟರ್ ಅಪರೇಟರ್ ವಿಠಲ ಚಂದರಗಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಸ್ಥಳೀಯ ಗ್ರಾಮಸ್ಥರಲ್ಲಿ ಮನವಿ: ಗೋಕಾಕ ತಾಪಂ ಇಒ ಪರುಶುರಾಮ ಘಸ್ತೆ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಬೆಟಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಗ್ರಾಪಂ ಸಿಬ್ಬಂದಿ ತೆರಳಿ ಕರ ಪಾವತಿಸಿಕೊಳ್ಳುವ ಕಾರ್ಯಕೈಗೊಂಡಿದ್ದಾರೆ. ಗ್ರಾಮದ ಗ್ರಾಮಸ್ಥರು ತಮ್ಮ ಮನೆ, ಅಂಗಡಿ, ಮುಂಗ್ಗಟ್ಟುಗಳ ಹಾಗೂ ಮತ್ತೀತರ ಕರಗಳನ್ನು ಸ್ಥಳೀಯ ಗ್ರಾಮ ಪಂಚಾಯ್ತಿ ಸಿಬ್ಬಂದಿ ಅವರಲ್ಲಿ ಕೊಡಲೇ ಪಾವತಿಸಿಕೊಳ್ಳಬೇಕು. ಸ್ಥಳೀಯರು ವಿವಿಧ ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಇಲ್ಲಿಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಈ ವೇಳೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇಲ್ಲಿಯ ಗ್ರಾಪಂ ಕಾರ್ಯದರ್ಶಿ ಎಮ್.ಪಿ.ತಳವಾರ, ಕರ ವಸೂಲಿಗಾರ ಸುರೇಶ ಬಾಣಸಿ, ಬಸವರಾಜ ಪಣದಿ, ವಿಠಲ ಚಂದರಗಿ, ಶಿವಾನಂದ ಐದುಡ್ಡಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 