ಗದಗ 21: ವಿದ್ಯಾರ್ಥಿಗಳು ಸ್ವಚ್ಛತೆ, ಆರೋಗ್ಯ, ಶಿಕ್ಷಣ ಹಾಗೂ ಪರಿಸರದ ಬಗ್ಗೆ ಕಾಳಜಿ ವಹಿಸಿಬೇಕು ಎಂದು ಕರ್ಲಗೇರಿ ಸ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳು ಟಿ.ಎಚ್. ಮುಗಳಿ ನುಡಿದರು.
ಗದಗ ಜೆಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಜಾನಪದ ಸಂಗೀತ ಮತ್ತು ಬೀದಿ ನಾಟಕದ ಮೂಲಕ ಸರ್ಕಾರದ ಯೋಜನೆಯ ಕುರಿತು ಜನ ಜಾಗೃತಿ ಮೂಡಿಸಲು ಕ್ಷೇತ್ರ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಶಾಲೆಯ ಸಹ ಶಿಕ್ಷಕ ಕೆ. ಪ್ರಸನ್ನಕುಮಾರ ಮಾತನಾಡಿ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದರ ಜೊತೆಗೆ ಹೆಚ್ಚು ಗಿಡಗಳನ್ನು ಬೆಳೆಸುವುದರಿಂದ ಸರಿಯಾಗಿ ಮಳೆಯಾಗುತ್ತದೆ. ಕಾಡನ್ನು ಬೆಳೆಸಿ ನಾಡನ್ನು ಉಳಿಸಬೇಕು ಎಂದು ತಿಳಿಸಿದರು.
ಕೊಣ್ಣೂರ ಮಲಪ್ರಭಾ ಸಾಂಸ್ಕೃತಿಕ ಕಲಾ ತಂಡ ದವರು ಬೀದಿ ನಾಟಕ ಮತ್ತು ಗಾನ ತರಂಗ ಸಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಮಾದಿಗರ ಸಂಸ್ಥೆ ಅಸುಂಡಿ ತಂಡಗಳಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿ ಗ್ರಾಮದ ಸ್ವಚ್ಛತೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸ್ತುತಿಸಿದರು. ಶಾಲೆಯ ಸಹ ಶಿಕ್ಷಕ ಎಮ್.ಎಸ್. ಮುಲ್ಲಾ, ಎಲ್.ಡಿ. ಹಿತ್ತಲಮನಿ, ಕುಮಾರಿ ಆರ್.ಜಿ. ಜಗಲಿ ಹಾಗೂ ವಾರ್ತಾ ಇಲಾಖೆ ಸಿಬ್ಬಂದಿಗಳು, ವಿದ್ಯಾಥರ್ಿಗಳು ಇದ್ದರು.