ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನ: ತಹಶೀಲ್ದಾರ್ ಪ್ರಕಾಶ ಸಿಂದಗಿ
ದೇವರ ಹಿಪ್ಪರಗಿ 20 : ತಾಲೂಕು ಆಡಳಿತದಿಂದ ಜ.26 ರಂದು ಗಣರಾಜ್ಯೊ?ತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲು ತಹಶೀಲ್ದಾರ್ ಪ್ರಕಾಶ ಸಿಂದಗಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಯಾವುದೇ ಲೋಪ ದೋಷಗಳಿಗೆ ಆಸ್ಪದ ನೀಡದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಕಚೇರಿ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರ, ಕಾರ್ಯಕ್ರಮದ ಸ್ಥಳದ ಸ್ವಚ್ಛತೆ, ಅತಿಥಿಗಳಿಗೆ ಆಸನದ, ಅಲ್ಫೋಪ ಆಹಾರದ ವ್ಯವಸ್ಥೆಗೆ ಕ್ರಮ ವಹಿಸಬೇಕು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಶಿಷ್ಟಾಚಾರದ ಬಗ್ಗೆ ಹಾಗೂ ಮೂಲಭೂತ ಸೌಲಭ್ಯ ವ್ಯವಸ್ಥೆ ವೇದಿಕೆ ನಿರ್ಮಾಣ ಸೇರಿದಂತೆ ಮುಂತಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ರಾಷ್ಟ್ರೀಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಇದ್ದ ಕಾರಣ ಹಲವು ಅಧಿಕಾರಿಗಳು ಗೈರು ಹಾಜರಿ ಬಗ್ಗೆ ಪ್ರಶ್ನೆಗೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.ನಂತರ ಸಿಂದಗಿ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಮಹಾಂತೇಶ ಯಡ್ರಾಮಿ ಅವರು ಮಾತನಾಡಿ, ಧ್ವಜಾರೋಹಣ, ಆರೋಹಣ ಸರಿಯಾದ ಸಮಯ ಪಾಲನೆ ಮಾಡಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ,ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ವರ್ಗ,ವಿವಿಧ ಸಂಘಟನೆಗಳ ಹಾಗೂ ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು.