ಲಾಠಿ ಚಾರ್ಜ್‌ಗೆ ಖಂಡನೆ : ಲಿಂಗಾಯತ ಪಂಚಮಸಾಲಿಗಳ ಪ್ರತಿಭಟನೆ

Condemnation of lathi charge: Lingayat Panchmasalis protest

ಬೆಳಗಾವಿ 16 : ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಬೆಳಗಾವಿಯ ಸುವರ್ಣ ಸೌಧ ಬಳಿ ಹೋರಾಟ ವೇಳೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ಗೆ ಖಂಡನೆ. ಬೆಳಗಾವಿಯಲ್ಲಿ ಪಂಚಮಸಾಲಿಯ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

ಬೆಳಗಾವಿಯ ಗಾಂಧಿ ಭವನದಿಂದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಲಿಂಗಾಯತರ ಮೇಲೆ ಲಾಠಿ ಚಾರ್ಜ್‌ ಮಾಡಿಸಿದ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಘೋಷಣೆ ಹಾಕಲಾಯಿತು. ಒಬ್ಬ ಪಂಚಮಸಾಲಿ ಕೋಟಿ ಪಂಚಮಸಾಲಿ, ಲಿಂಗಾಯತ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಹಾಕಲಾಯಿತು. ಲಾಠಿ ಚಾರ್ಜ್‌ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಯಿತು. ನಾಳೆ ನಮಗೆ ಪ್ರತಿಭಟನೆಗೆ ಅನುಮತಿ ನೀಡಬೇಕು ಇಲ್ಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. 

ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ವೇಳೆ ಲಾಠಿ ಚಾರ್ಜ್‌ಗೆ ಖಂಡನೆ. ಬೆಳಗಾವಿಯಲ್ಲಿ ಅನಿರ್ದಿಷ್ಟಾವಧಿ ಧರಣಿಗೆ ಬಸವ ಜಯಮೃತ್ಯುಂಜಯ ಶ್ರೀ ಚಾಲನೆ ನೀಡಿದರು. ಚನ್ನಮ್ಮ ಪ್ರತಿಮೆಗೆ ಮಾಲಾರೆ​‍್ಣ ಮಾಡಿ ಗಾಂಧಿ ಭವನಕ್ಕೆ ವಾಪಸ್ ಆಗಮಿಸಿದರು. ಬೆಳಗಾವಿಯ ಗಾಂಧಿ ಭವನದಲ್ಲಿಯೇ ಪ್ರತಿಭಟನೆ ಆರಂಭಿಸಿದ ಬಸವ ಜಯಮೃತ್ಯುಂಜಯ ಶ್ರೀ. ಪ್ರಾರ್ಥನೆ ಮಾಡುವ ಮೂಲಕ ಅನಿರ್ದಿಷ್ಟಾವಧಿ ಧರಣಿಗೆ ಚಾಲನೆ ನೀಡಿದರು.