ಗಣೇಶೋತ್ಸವ ಹೆಸರಿನಲ್ಲಿ ಮರಗಳ ಕಡಿತ ಖಂಡನೆ
Condemnation of tree felling in the name of Ganeshotsava
ಲೋಕದರ್ಶನ ವರದಿ
ವಿಜಯಪುರ ಸೆ. 4: ನಗರದ ಐಶ್ವರ್ಯ ಬಡಾವಣೆಯಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಬೆಳೆದಿದ್ದ ಮರಗಳನ್ನು ಗಣೇಶೋತ್ಸವದ ನೆಪದಲ್ಲಿ ಕಡಿದು ಹಾಕಿರುವ ಘಟನೆಯನ್ನು ಖಂಡಿಸಿ, ವೃಕ್ಷ ಅಭಿಯಾನ ಪ್ರತಿಷ್ಠಾನದಿಂದ ವಿಜಯಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ವಿಜಯಪುರ ಜಿಲ್ಲೆ ಬರಪೀಡಿತ ಪ್ರದೇಶವಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ಹಸೀರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಸಚಿವ ಎಂ.ಬಿ. ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಹಸಿರು ಪರಿಸರ ನಿರ್ಮಾಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಉದ್ಯಾನವನದಲ್ಲಿನ ಬೆಳೆದ ಮರಗಳನ್ನು ಅನುಮತಿ ಇಲ್ಲದೆ ಕಡಿದು ಹಾಕಿರುವುದು ವಿಷಾದನೀಯ. ಹಬ್ಬಗಳ ಆಚರಣೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಭಾಗವಾಗಿದ್ದರೂ, ಯಾವುದೇ ಆಚರಣೆ ಪರಿಸರಕ್ಕೆ ಹಾನಿಯಾಗುವಂತಿರಬಾರದು ಎಂದು ಪ್ರತಿಷ್ಠಾನ ತಿಳಿಸಿದೆ.
ಅನುಮತಿ ಇಲ್ಲದೆ ಮರಗಳನ್ನು ಕಡಿದಿರುವ ವ್ಯಕ್ತಿಗಳು ಅಥವಾ ಸಂಘಟನೆಗಳನ್ನು ಪತ್ತೆಹಚ್ಚಿ, ಸಂಬಂಧಿಸಿದ ವೃಕ್ಷ ಸಂರಕ್ಷಣಾ ಹಾಗೂ ಪರಿಸರ ಕಾಯ್ದೆಗಳಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸುವಂತೆ ಪ್ರತಿಷ್ಠಾನ ಒತ್ತಾಯಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 