ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಕ್ರಮವನ್ನು ಖಂಡಿಸಿ
Condemning the forcible removal of the January leave of students who had come to write the CET exam
ವಿಜಯನಗರ 26: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಕ್ರಮವನ್ನು ಎಐಡಿಎಸ್‌ಓ (ಂಋಖಓ) ವಿಜಯನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ವಿದ್ಯಾರ್ಥಿಗಳು ಧರಿಸುವ ಯಾವುದೇ ವೈಯಕ್ತಿಕ ಧಾರ್ಮಿಕ ಚಿಹ್ನೆಗಳನ್ನು ತೆಗೆಸಬಾರದು ಎಂದು ಕೆಇಎ (ಏಇಂ) ಮಾರ್ಗಸೂಚಿಗಳಿದ್ದರು ಸಹ, ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಒತ್ತಾಯಿಸಿದ್ದಾರೆ. ಜೊತೆಗೆ, ಒಂದು ಕಡೆ ಜನಿವಾರವನ್ನು ಬಲವಂತದಿಂದ ಕಿತ್ತು ಹಾಕಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆಗಳು ನಡೆದಿದ್ದವು.
ಖಾಸಗಿ ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲೇ ಧಾರ್ಮಿಕ ಹಬ್ಬಗಳು ಮತ್ತು ಚಟುವಟಿಕೆಗಳು ಬಹಿರಂಗವಾಗಿ ನಡೆಯುತ್ತಿರುವಾಗ, ವಿದ್ಯಾರ್ಥಿಗಳ ವೈಯಕ್ತಿಕ ನಂಬಿಕೆಗಳ ಮೇಲೆ ದಾಳಿ ಮಾಡುವುದು ಅವರಲ್ಲಿ ಆಳವಾದ ಮಾನಸಿಕ ಆಘಾತವನ್ನು ಉಂಟುಮಾಡುತ್ತದೆ. ಸಾಮಾಜಿಕ ವಿಷಯಗಳಲ್ಲಿ ಧರ್ಮವನ್ನು ಗುರುತಿಸದಿರುವುದು ಅಥವಾ ಪ್ರೋತ್ಸಾಹಿಸದಿರುವುದೇ ನಿಜವಾದ ಧರ್ಮನಿರಪೇಕ್ಷ ರಾಷ್ಟ್ರದ ಲಕ್ಷಣವಾಗಿದೆ. ಮಹಾನ್ ವಿವೇಕಾನಂದರು ಕೂಡ ಇದನ್ನೇ ಹೇಳಿದ್ದರು.
ಆದರೂ ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇದು ಎಗ್ಗಿಲ್ಲದೆ ನಡೆಯುತ್ತಿದೆ ಮತ್ತು ವೈಯಕ್ತಿಕವಾಗಿ ವಿದ್ಯಾರ್ಥಿಗಳನ್ನು ಗುರಿಪಡಿಸಲಾಗುತ್ತಿದೆ. ಇದೆಲ್ಲವೂ ಹಿಜಾಬ್ ವಿವಾದದೊಂದಿಗೆ ಪ್ರಾರಂಭವಾಯಿತು. ನಾಲ್ಕು ವರ್ಷಗಳ ಹಿಂದೆ ಯುವತಿಯರನ್ನು ಹಿಜಾಬ್ ಧರಿಸಿದ್ದಕ್ಕಾಗಿ ಗುರಿಪಡಿಸಲಾಯಿತು ಮತ್ತು ಅವರ ಶಿಕ್ಷಣದ ಹಕ್ಕನ್ನು ಮೊಟಕುಗೊಳಿಸಲಾಯಿತು. ಆ ಘಟನೆಯನ್ನು ನೈಜ ಧರ್ಮ ನಿರಪೇಕ್ಷ ತತ್ವಗಳೊಂದಿಗೆ ನಿರ್ವಹಿಸದ ಕಾರಣ, ಅದರ ಪರಿಣಾಮವು ಇಂದು ಇತರ ಧರ್ಮಗಳ ವಿದ್ಯಾರ್ಥಿಗಳ ವಿಷಯದಲ್ಲೂ ಮರುಕಳಿಸುತ್ತಿರುವುದನ್ನು ನಾವು ನೋಡುತ್ತಿದ್ದೇವೆ.
ವೈಯಕ್ತಿಕ ನಂಬಿಕೆಗಳ ಮೇಲೆ ದಾಳಿ ಮಾಡುವುದಲ್ಲ, ಬದಲಾಗಿ ಸರ್ಕಾರವು ಯಾವುದೇ ಧರ್ಮಕ್ಕೆ ಆಶ್ರಯ ನೀಡದಿರುವುದೇ ನಿಜವಾದ ಧರ್ಮನಿರಪೇಕ್ಷತೆ ಎಂದು ಎಐಡಿಎಸ್‌ಒ ನಂಬುತ್ತದೆ. ಧಾರ್ಮಿಕ ಚಿಹ್ನೆಗಳ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಗುರಿಪಡಿಸುವುದು ಧರ್ಮನಿರಪೇಕ್ಷಾ ತತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿ, ಯುವ ವಿದ್ಯಾರ್ಥಿಗಳ ಮನಸ್ಸನ್ನು ಘಾಸಿ ಗೊಳಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಐಡಿಎಸ್‌ಓ ಮನವಿ ಮಾಡುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿ ನೈಜ ಧರ್ಮ ನಿರಪೇಕ್ಷತೆಯನ್ನು ಬಲಪಡಿಸಲು ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಎಐಡಿಎಸ್‌ಓ ವಿಜಯನಗರ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 