ನಿಯಮಿತವಾಗಿ ಅಪೌಷ್ಟಿಕ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ: ಮಹಮ್ಮದ್ ಹ್ಯಾರೀಸ್ ಸುಮೈರ್
Conduct regular health check-ups of malnourished children: Mohammed Harris Sumair
ಬಳ್ಳಾರಿ 03: ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಇರುವ ಮಕ್ಕಳ ಆರೋಗ್ಯ ನಿಯಮಿತವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೆರ್ ಅವರು ಹೇಳಿದರು.
ಮಂಗಳವಾರದಂದು, ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ಆರೋಗ್ಯ ತಪಾಸಣೆ ಕುರಿತು ವರ್ಚುವಲ್ ಮೂಲಕ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಮಕ್ಕಳ ಎತ್ತರ, ತೂಕ ಇದರ ಬಗ್ಗೆ ಪೋಷಣ್ ಟ್ರ್ಯಾಕ್ ಮೂಲಕ ಅನುಸರಣೆ ಮಾಡಬೇಕು. ತೀವ್ರತರ ಅಪೌಷ್ಟಿಕ ಮಕ್ಕಳು ಕಂಡುಬಂದಲ್ಲಿ ಸೂಕ್ತ ಚಿಕಿತ್ಸಾನುಸಾರ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಇದರಿಂದ ಮಗುವಿನ ಮುಂದಿನ ಬೆಳವಣಿಗೆ ಆರೋಗ್ಯಕರವಾಗಿರುತ್ತದೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಎಲ್ಲಾ ವೈದ್ಯಾಧಿಕಾರಿಗಳು ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ಆರೋಗ್ಯ ತಪಾಸಣೆ ಸರಿಯಾಗಿ ನಡೆಸುತ್ತಿದ್ದಾರೆಯೇ ಎಂದು ವಿಚಾರಿಸಿದ ಅವರು, ಈ ವಿಧದಲ್ಲಿ ತಾಲ್ಲೂಕು ನೋಡಲ್ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು ಎಂದರು.ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆಯನ್ನು ಆರೋಗ್ಯ ಮೇಳ ವಿಧದಲ್ಲಿ ಆಯೋಜಿಸಬೇಕು. ತಪಾಸಣೆ ಸಮಯದಲ್ಲಿ ಕ್ಷೇತ್ರಕ್ಕೆ ಸಂಬಂಧಪಟ್ಟ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಖುದ್ದು ಹಾಜರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ನಡೆಯುವ ಮುನ್ನ ದಾಖಲಾದ ಎಲ್ಲಾ ಮಕ್ಕಳ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ನಂತರ ಆರೋಗ್ಯ ತಪಾಸಣೆ ನಂತರ ನಿಗಧಿತ ಸಮಯದಲ್ಲಿ ವರದಿ ನೀಡಬೇಕು ಎಂದು ಹೇಳಿದರು.ಬಳಿಕ ಜಿಲ್ಲೆಯಲ್ಲಿನ ಗರ್ಭಿಣಿ ತಾಯಂದಿರ ಬಗ್ಗೆ ಚರ್ಚಿಸುತ್ತಾ ರಕ್ತಹೀನತೆ, ಅಧಿಕ ರಕ್ತದೊತ್ತಡ ನಿರ್ವಹಣೆಯ ಕುರಿತು ಕಾಳಜಿವಹಿಸಿ ಪ್ರತಿಯೊಬ್ಬ ಗರ್ಭಿಣಿಯರ ತಾಯಿ ಕಾರ್ಡ್ ಪರೀಶೀಲಿಸಬೇಕು. ಗರ್ಭಿಣಿ ತಾಯಂದಿರು ಕಬ್ಬಿಣಾಂಶ ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವುದರ ಬಗ್ಗೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಗಮನಿಸಬೇಕು ಎಂದು ಸೂಚಿಸಿದರು.
ಪ್ರಧಾನಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳು ಹಿಮೊಗ್ಲೋಬಿನ್ ಪರೀಕ್ಷೆ ಕೈಗೊಳ್ಳಬೇಕು. ಈ ಕುರಿತು ತಾಯಿಕಾರ್ಡ್‌ನಲ್ಲಿ ನಮೂದಿಸಬೇಕು. ನಂತರ ಅಧಿಕ ರಕ್ತದೊತ್ತಡ ನಿಯಮಿತವಾಗಿ ತಪಾಸಣೆ ಮಾಡುತ್ತಿರಬೇಕು. ಇವರೆಡರಿಂದಲೇ ತಾಯಿ ಮರಣ ಸಂಭವಿಸಲು ಕಾರಣವಾಗಬಹುದು ಎಂದು ಎಚ್ಚರಿಸಿದರು.ಸಭೆಯಲ್ಲಿ ಎಲ್ಲಾ ತಾಲ್ಲೂಕ ನೋಡಲ್ ಅಧಿಕಾರಿಗಳು ಎಲ್ಲಾ ವೈದ್ಯಾಧಿಕಾರಿಗಳಿಗೆ ಸಭೆ ನಡೆಸಿ ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆ ಮಕ್ಕಳ ವರದಿ ನೀಡಲು ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 