ಮಾದಕ ವಸ್ತು ಬಳಕೆ ತಡೆಗೆ ಅನೀರೀಕ್ಷಿತ ತಪಾಸಣೆ ಕೈಗೊಳ್ಳಿ: ಜಿಲ್ಲಾಧಿಕಾರಿ
Conduct surprise inspections to prevent drug use: District Collector
ಲೋಕದರ್ಶನ ವರದಿ
ಕಾರವಾರ 28 : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಸರಬರಾಜು ತಡೆಯಲು ಅನುಮಾನಾಸ್ಪದವಾಗಿ ಕಂಡು ಬರುವ ಹೋಂ ಸ್ಟೇ ಗಳು ಮತ್ತು ರೆಸಾರ್ಟ್‌ಗಳಲ್ಲಿ ಅನೀರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಕಾರ್ಡ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆ ಕುರಿತಂತೆ ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ 18 ರಿಂದ 35 ವಯೋಮಿತಿಯ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ದುಶ್ಚಟಕ್ಕೆ ಬಲಿಯಾಗುತ್ತಿರುವುದು ಕಂಡು ಬರುತ್ತಿದ್ದು, ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯ ಅರಿವು ಕಾರ್ಯಕ್ರಮಗಳನ್ನು ಅಯೋಜಿಸುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್ ಗಳಲ್ಲಿ ವೈದ್ಯರ ಸಲಹಾ ಚೀಟಿ ಇಲ್ಲದೇ ಓಷಧಗಳನ್ನು ಸರಬರಾಜು ಮಾಡದಂತೆ ಸೂಚನೆ ನೀಡುವಂತೆ ಮತ್ತು ಈ ಕುರಿತು ಮೆಡಿಕಲ್ ಶಾಪ್ ಗಳಲ್ಲಿ ಭಿತ್ತಿಪತ್ರ ಅಳವಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಓಷಧ ನಿಯಂತ್ರಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಲಹಾ ಚೀಟಿ ಇಲ್ಲದೇ ಓಷಧ ವಿತರಿಸುವ ಶಾಪ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಮಾದಕ ವಸ್ತುಗಳ ಸಂಗ್ರಹ, ಬಳಕೆ, ಸರಬರಾಜು ಕುರಿತಂತೆ ಮಾಹಿತಿ ನೀಡಲು ರಚಿಸಿರುವ ಡ್ರಗ್ ಫ್ರೀ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಬಳಕೆ ಮತ್ತು ಅದರ ಉಪಯೋಗದ ಕುರಿತಂತೆ ಸಾರ್ವಜನಿರಕಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಎನ್ ಕಾರ್ಡ್ ಸಮಿತಿಯ ಎಲ್ಲಾ ಸದಸ್ಯರು ಪ್ರತೀ ತಿಂಗಳು ತಮ್ಮ ಇಲಾಖೆಯ ವ್ಯಾಪ್ತಿಯಲ್ಲ್ಲಿ ಕೈಗೊಂಡ ತಪಾಸಣೆಯ ಕುರಿತ ಪ್ರಗತಿ ವರದಿಯನ್ನು ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ 2026 ರಲ್ಲಿ ಇದುವರೆಗೆ ಮಾದಕ ವಸ್ತು ಸರಬರಾಜಿನ 8 ಪ್ರಕರಣಗಳಲ್ಲಿ 14 ಮಂದಿಯನ್ನು ಬಂಧಿಸಿ, ರೂ. 1,49,500 ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಮಾದಕ ವಸ್ತು ಸೇವನೆಯ 97 ಪ್ರಕರಣಗಳಲ್ಲಿ 112 ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು. ಸಭೆಯಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಬಂದರು, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 