ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ
ಮಂಗಳೂರು, ಮೇ 6, ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ. ಸರಕಾರಿ ಆದೇಶದಂತೆ, ಅರ್ಹರಿರುವ ಕೈಗಾರಿಕೆಗಳು, ಐಟಿ/ಐಟಿಇಎಸ್ ಕಂಪನಿಗಳು, ಡಾಟಾ/ಕಾಲ್ ಸೆಂಟರ್‍ಗಳು, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್ ಸರ್ವಿಸಸ್, ಇಂಕ್ಯೂಬರೇಟರ್‌ಗಳು ಹಾಗೂ ಇನ್ನಿತರ ಕಂಪೆನಿಗಳು ಕಾರ್ಯನಿರ್ವಹಿಸುವ ಬಗ್ಗೆ ಆನ್‍ಲೈನ್‍ನಲ್ಲಿ ಸ್ವಯಂ ದೃಢೀಕರಣ ಸಲ್ಲಿಸಿದ ನಂತರ ಘಟಕ ಪ್ರಾರಂಭಿಸಬಹುದಾಗಿದೆ. ಈಗಾಗಲೇ ಪ್ರಾರಂಭಿಸಿರುವ ಘಟಕಗಳು ಸಹ ಈ ಲಿಂಕ್ ಮೂಲಕ ಸ್ವಯಂ ದೃಢೀಕರಣ ಸಲ್ಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 