ಎನ್ಯೂಮರೇಷನ್ ಫಾರ್ಮ್ ಭರ್ತಿಯಲ್ಲಿ ಗೊಂದಲ; ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ ಆಗ್ರಹ
Confusion over filling out enumeration forms; demand for clear information to the public
ಲೋಕದರ್ಶನ ವರದಿ
ಗದಗ, ಜು.8: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಎಲ್‌ಒಗಳು ಮನೆಮನೆಗೆ ತೆರಳಿ ಎನ್ಯೂಮರೇಷನ್ ಅರ್ಜಿಗಳನ್ನು ವಿತರಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆದರೆ ಅರ್ಜಿ ಭರ್ತಿ ಮಾಡುವ ವಿಧಾನ ಹಾಗೂ ದಾಖಲಾತಿಗಳ ಕುರಿತು ಸಾರ್ವಜನಿಕರಲ್ಲಿ ಇನ್ನೂ ಗೊಂದಲ ಮುಂದುವರಿದಿದೆ.
2002ರ ಮತದಾರರ ಪಟ್ಟಿಯಲ್ಲಿರುವ ಹೆಸರುಗಳು ಹಾಗೂ ಪ್ರಸ್ತುತ ದಾಖಲೆಗಳಲ್ಲಿ ಕಂಡುಬರುವ ವ್ಯತ್ಯಾಸಗಳಿಂದ ಮತದಾರರು ತಮ್ಮ ಹೆಸರು ಮತ್ತು ಇತರ ವಿವರಗಳನ್ನು ಹೇಗೆ ನಮೂದಿಸಬೇಕು ಎಂಬ ಗೊಂದಲಕ್ಕೆ ಒಳಗಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ವಂಚಿತರಾಗುವ ಭಯ ಜನರಲ್ಲಿ ಉಂಟಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ನ್ಯಾಯವಾದಿ ರಾಘವೇಂದ್ರ ಪಾಲನಕರ ತಿಳಿಸಿದ್ದಾರೆ.
ಚುನಾವಣಾ ಆಯೋಗದ ಸ್ಪಷ್ಟೀಕರಣದ ಪ್ರಕಾರ, 2002ರ ಮತದಾರರ ಪಟ್ಟಿಯ ಮಾಹಿತಿ ಮತ್ತು 2025ರ ಪಟ್ಟಿಯಲ್ಲಿನ ವಿವರಗಳು ಹೊಂದಿಕೆಯಾಗದಿದ್ದರೆ, ಸಂಬಂಧಿತ ಮತದಾರರಿಗೆ ನೋಟಿಸ್ ನೀಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ 11 ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆ ಸಲ್ಲಿಸಿದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಆದರೆ, ವಿದ್ಯಾವಂತರು ಮತ್ತು ಸುಶಿಕ್ಷಿತರೂ ಸಹ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮರ್ಕ ಮಾಹಿತಿ ಇಲ್ಲದೆ ಗೊಂದಲದಲ್ಲಿರುವಾಗ, ಗ್ರಾಮೀಣ ಮತ್ತು ಅಕ್ಷರಜ್ಞಾನ ಕಡಿಮೆ ಇರುವ ಜನರಿಗೆ ಇನ್ನಷ್ಟು ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಪಾಲನಕರ ಅಭಿಪ್ರಾಯಪಟ್ಟಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 