ಆರೋಗ್ಯ ಸಂಜೀವಿನಿ ಯೋಜನೆ ಜಾರಿ: ಅಭಿನಂದನೆ
Congratulations on the implementation of the Arogya Sanjeevini scheme
ತಾಳಿಕೋಟಿ 30: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರಿ ನೌಕರರಿಗೆ ಹರ್ಷ ತಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಉಪಮುಖ್ಯಮಂತ್ರಿಗಳಾದ ಡಿ.ಕೆ .ಶಿವಕುಮಾರ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು, ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ. ಎಸ್.ನಾಡಗೌಡ( ಅಪ್ಪಾಜಿ)ಅವರಿಗೂ ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಸುರೇಶ ಶೇಡಶ್ಯಾಳ ಅವರಿಗೂ ಸರ್ಕಾರಿ ನೌಕರ ಸಂಘದ ತಾಳಿಕೋಟಿ ತಾಲೂಕು ಘಟಕದ ಅಧ್ಯಕ್ಷರಾದ ಶಿವರಾಜ್ ಚೌಧರಿ ಅವರು ಅಭಿನಂದಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು ಈ ಮಹತ್ವಕಾಂಕ್ಷಿ ಯೋಜನೆ ಸರಕಾರದ ವಿವಿಧ ಇಲಾಖೆಗಳ 6 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಅಂದಾಜು 25 ಲಕ್ಷ ಫಲಾನುಭವಿಗಳು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆದುಕೊಳ್ಳಲಿದ್ದಾರೆ. ಸರ್ಕಾರಿ ನೌಕರರಿಗೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳು ಹಾಗೂ ಶಸ್ತ್ರಚಿಕಿತ್ಸೆ ಸೇರಿದಂತೆ ಬಹುತೇಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ದೊರೆಯಲಿದೆ ಹೀಗಾಗಿ ನೌಕರರ ಆರೋಗ್ಯ ಹಿತ ಕಾಪಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಯೋಜನೆ ಜಾರಿಗೆ ಸಹಕರಿಸಿದ ಕ್ಷೇತ್ರದ ಶಾಸಕರಾದ ಅಪ್ಪಾಜಿ ನಾಡಗೌಡರಿಗೆ ನೌಕರರ ಸಂಘದ ಪರವಾಗಿ ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 