ತಾಳಿಕೋಟಿ, 27; ಪಟ್ಟಣದಲ್ಲಿ ಫೆಬ್ರುವರಿ 21ರಿಂದ 23ರ ವರೆಗೆ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯವರು ಹಮ್ಮಿಕೊಂಡ ಕನ್ನಡದಲ್ಲಿ ಕುರಾನ್ ಪ್ರವಚನ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಸರ್ವ ಸಮಾಜದ ಬಂಧುಗಳಿಗೆ ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಅವರು ಶಾಂತಿ ಸಾಮರಸ್ಯಕ್ಕೆ ಹೆಸರುವಾಸಿಯಾದ ತಾಳಿಕೋಟಿ ಪಟ್ಟಣದಲ್ಲಿ ಎಲ್ಲ ಸಮಾಜದ ಬಾಂಧವರು ಜಮಾತ್ ನ ಈ ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದ್ದಾರೆ, ಮನ ಪರಿವರ್ತನೆ ಆಗುವ ರೀತಿಯಲ್ಲಿ ಕನ್ನಡದಲ್ಲಿ ಪ್ರವಚನ ನೀಡಿದ ಶಾಂತಿ ಪ್ರಕಾಶನ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ವೇದಿಕೆಗೆ ಸಾನಿಧ್ಯ ವಹಿಸಿದ ಮಠಾಧೀಶರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಶ್ರೀ ಶಿವಕುಮಾರ ಮಹಾಸ್ವಾಮಿಗಳು, ಶ್ರೀ ಶರಣಪ್ಪ ಮುತ್ಯಾ ಶರಣರ, ಶ್ರೀ ರಾಜಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು, ಶ್ರೀ ರಾಮಲಿಂಗಯ್ಯ ಮಹಾಸ್ವಾಮಿಗಳು, ಶ್ರೀ ಡಾ.ಚನ್ನವೀರ ಶಿವಾಚಾರ್ಯರು ಹಾಗೂ ಶ್ರೀ ಗುರುಲಿಂಗ ಶಿವಾಚಾರ್ಯರು, ಸಚಿವರಾದ ಶಿವಾನಂದ ಪಾಟೀಲ, ಶಾಸಕ ರಾಜುಗೌಡ ಪಾಟೀಲ, ವಿವಿಧ ಪಕ್ಷ ಸಂಘ-ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ಈ ಐತಿಹಾಸಿಕ ಕಾರ್ಯಕ್ರಮದ ಯಶಸ್ವಿಗಾಗಿ ಹಗಲಿರುಳು ಶ್ರಮಿಸಿದ ಜಮಾತೆ ಇಸ್ಲಾಮಿ ಹಿಂದ್ ನ ಎಲ್ಲ ಪದಾಧಿಕಾರಿಗಳಿಗೆ ಕಾರ್ಯಕರ್ತರಿಗೆ ಹಾಗೂ ವಿಶೇಷವಾಗಿ ಈ ಪ್ರವಚನದ ಸಂದೇಶವನ್ನು ಇಡೀ ನಾಡಿಗೆ ತಲುಪಿಸುವ ಕಾರ್ಯವನ್ನು ಮಾಡಿದ ಮಾಧ್ಯಮದ ಪ್ರತಿನಿಧಿಗಳಿಗೆ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.