ನೂತನ ಉಪ ವಿಭಾಗಾಧಿಕಾರಿಗೆ ಅಭಿನಂದನೆ
Congratulations to the new Assistant Commissioner
ಕೊಪ್ಪಳ 4: ಕೊಪ್ಪಳ ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿಯಾಗಿ ಸರ್ಕಾರದಿಂದ ವರ್ಗಾವಣೆಯಾಗಿ ಆಗಮಿಸಿರುವ ಮೆಹಬೂಬ್ ಜೀಲಾನ್ ಅವರನ್ನು ಜಿಲ್ಲಾ ಆಡಳಿತ ಭವನದಲ್ಲಿರುವ ಅವರ ಕಚೇರಿಯಲ್ಲಿ ನಿವೃತ್ತ ಉಪ ತಹಶೀಲ್ದಾರ್ ಹಾಗೂ ಕೊಪ್ಪಳ ಜಿಲ್ಲಾ ರಾಬಿತಾ-ಎ-ಮಿಲ್ಲತ್ ಸಂಸ್ಥೆಯ ಅಧ್ಯಕ್ಷ ಹಾಜಿ ಎಂ. ಲಾಯಕ್ ಅಲಿ ಭೇಟಿ ಮಾಡಿ ಸನ್ಮಾನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೆಹಬೂಬ್ ಜೀಲಾನ್, ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗವೂ ನೀರೀಕ್ಷಿತವಾಗಿದೆ ಎಂದು ತಿಳಿಸಿದರು.
ತಮ್ಮನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಹಾಜಿ ಎಂ. ಲಾಯಕ್ ಅಲಿ ಹಾಗೂ ಸಂಸ್ಥೆಯ ಪದಾಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ರಾಜು ಫಿರಂಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 