ಹುಬ್ಬಳ್ಳಿ 11: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಕರ್ಾರವನ್ನು ಪತನಗೊಳಿಸಲು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿದರೆ ಕಾಂಗ್ರೆಸ್ ಕೂಡ ಬಿಜೆಪಿ ಶಾಸಕರನ್ನು ಸೆಳೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಮೈತ್ರಿ ಸಕರ್ಾರವನ್ನು ಪತನಗೊಳಿಸುವ ಬಿಜೆಪಿಯ ಯತ್ನವನ್ನು ವಿಫಲಗೊಳಿಸಲಾಗುವುದು. ಸಕರ್ಾರವನ್ನು ರಕ್ಷಿಸಲು ನಾವು ಕೂಡ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಸೆಳೆಯಲು ಪ್ರಯತ್ನಿಸಿದರೆ ನಾವು ಕೂಡ ಬಿಜೆಪಿಯ ಶಾಸಕರನ್ನು ನಮ್ಮ ಪಕ್ಷಕ್ಕೆ ಸೆಳೆಯುವ ಸಾಮಥ್ರ್ಯ ಹೊಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದರು.
ಕರ್ನಾಟಕದಲ್ಲಿ ಸರಕಾರ ಬದಲಾಗಲಿದೆ ಎಂಬ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಹೇಳುವುದೆಲ್ಲಾ ಸುಳ್ಳು. ಮುಖ್ಯಮಂತ್ರಿಯಾಗುತ್ತೇನೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ, ಕಳೆದ ಬಾರಿ ಆದ ಘಟನೆಯಿಂದ ಅವರು ಇನ್ನೂ ಪಾಠ ಕಲಿತಂತಿಲ್ಲ ಎಂದು ವ್ಯಂಗ್ಯವಾಡಿದರು.
ನಮ್ಮ 10 ಶಾಸಕರನ್ನು ಬಿಜೆಪಿ ಸೆಳೆದರೆ, ಕೇಸರಿ ಪಾಳಯದಿಂದ 20 ಶಾಸಕರನ್ನು ಕರೆತರುವ ಸಾಮಥ್ರ್ಯ ನಮಗಿದೆ. ಬಿಜೆಪಿ ನಾಯಕರು ಸಕರ್ಾರವನ್ನು ಪತನಗೊಳಿಸಲು ನಡೆಸುತ್ತಿರುವ ಪ್ರಯತ್ನವನ್ನು ನಾವು ನೋಡಿದ್ದೇವೆ, ಮತ್ತೊಮ್ಮೆ ಅದು ವಿಫಲವಾಗಲಿದೆ ಎಂದು ಅವರು ಭವಿಷ್ಯ ನುಡಿದರು