ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಬೈಕ್ ರಾ್ಯಲಿ
Congress Foundation Day Celebration: Bike Rally
ಹಾನಗಲ್ 14: ಅಖಿಲ ಭಾರತ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಬೈಕ್ ರಾ್ಯಲಿ ಆಯೋಜಿಸಲಾಗಿತ್ತು.
ಇಲ್ಲಿನ ತಾಲೂಕಾ ಕ್ರೀಡಾಂಗಣದ ಬಳಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ ರಾ್ಯಲಿಗೆ ಚಾಲನೆ ನೀಡಿ, ಯುವಜನರಲ್ಲಿ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಶ್ರಮ ವಹಿಸುವ ಅಗತ್ಯವಿದೆ. ಹಲವು ದಶಕಗಳಿಂದ ಯುವ ಕಾಂಗ್ರೆಸ್ ಹತ್ತು, ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸಾಮಾಜಿಕ ಪರಿವರ್ತನೆಗೆ ಯುವಕರು ದೃಢಸಂಕಲ್ಪ ಗೈಯ್ಯಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಓಡಿಸಬೇಕು ಎನ್ನುವ ಉದ್ದೇಶದಿಂದ 300 ಹೆಲ್ಮೆಟ್ ವಿತರಿಸಿ, ಜಾಗೃತಿ ಮೂಡಿಸಲಾಯಿತು. ಮುಖ್ಯರಸ್ತೆ ಮಾರ್ಗವಾಗಿ ರಾ್ಯಲಿ ಡಾ.ಬಾಬು ಜಗಜೀವನರಾಂ ಭವನ ತಲುಪಿತು. ಬಳಿಕ ಅಲ್ಲಿ ಯುವ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಲಾಯಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದರ್ಶನ ಲಮಾಣಿ, ಉಪಾಧ್ಯಕ್ಷರಾದ ಶಿವು ತಳವಾರ, ಪ್ರಸನ್ನ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಮಡಿವಾಳರ, ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ, ಬ್ಲಾಕ್ ಅಧ್ಯಕ್ಷರಾದ ಪ್ರವೀಣ ಹಿರೇಮಠ, ಬಾಬು ನಿಕ್ಕಂ ಸೇರಿದಂತೆ ಅನೇಕರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 