ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ನಾಯಕರ ಸದ್ಭಾವನಾ ಪಾದಯಾತ್ರೆ
ಬೆಂಗಳೂರು, ಡಿಸೆಂಬರ್ 28
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಾಂಗ್ರೆಸ್
ನಾಯಕರು, ಕಾರ್ಯಕರ್ತರು ಕೆಪಿಸಿಸಿ ಕಚೇರಿಯಿಂದ ಫ್ರೀಡಂಪಾರ್ಕ್ವರೆಗೆ
ಸದ್ಭಾವನಾ ಪಾದಯಾತ್ರೆ ನಡೆಸಿದರು. 135ನೇ ಕಾಂಗ್ರೆಸ್
ಸಂಸ್ಥಾಪನಾ ದಿನಾಚರಣೆ ಕೇವಲ ರಾಜಧಾನಿ ಮಾತ್ರವಲ್ಲದೇ ಜಿಲ್ಲಾ ಕಾಂಗ್ರೆಸ್ ಘಟಕಗಳ ವತಿಯಿಂದ ನಡೆಯಲಿದೆ.ಕಾಂಗ್ರೆಸ್
ನಾಯಕರಾದ ಡಿ.ಕೆ ಶಿವಕುಮಾರ್, ದಿನೇಶ್ ಗುಂಡೂರಾವ್,
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವೀರಪ್ಪ ಮೊಯ್ಲಿ ಸೇರಿ ನೂರಾರು ಕಾರ್ಯಕರ್ತರು ಸದ್ಬಾವನಾ
ನಡಿಗೆಯಲ್ಲಿ ಭಾಗಿಯಾಗಿದ್ದರು. ಸದ್ಭಾವನ ನಡಿಗೆ ಹಿನ್ನೆಲೆ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕೆಪಿಸಿಸಿ
ಅಧ್ಯಕ್ಷ ಪಟ್ಟಕ್ಕಾಗಿ ಈ ಪಾದಯಾತ್ರೆ ಮಾಡುತ್ತಿಲ್ಲ. ದೇಶದಲ್ಲಿ ಸಂವಿಧಾನ ಉಳಿಸಬೇಕು. ಈ ನಿಟ್ಟಿನಲ್ಲಿ
ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಈ ವೇಳೆ ವಿವಾದ ಸೃಷ್ಟಿಸಿದ ಏಸು ಪ್ರತಿಮೆಗೆ ಭೂಮಿ
ನೀಡಿದ್ದ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ
ಪ್ರಶ್ನೆಗೆ ಅವರು ಉತ್ತರಿಸಲು ನಿರಾಕರಿಸಿ, ಬೇರೆ ಸಮಯದಲ್ಲಿ ಉತ್ತರ ಕೊಡುವುದಾಗಿ ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 