ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ

ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ

ಕಾಗವಾಡ 15 : ಕಾಂಗ್ರೆಸ್ ಪಕ್ಷದ ಶಾಸಕರು ಮಾರಾಟಕ್ಕಿಲ್ಲ. ನಮ್ಮ ಪಕ್ಷದ ಶಾಸಕರೆಲ್ಲರೂ ಸ್ವಾಭಿಮಾನಿಗಳಿದ್ದಾರೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಅವರು, ಶುಕ್ರವಾರ ದಿ. 15 ರಂದು ಕಾಗವಾಡ ಪಟ್ಟಣದಲ್ಲಿ ವಕೀಲರು ಹಮ್ಮಿಕೊಂಡಿದ್ದ ಮುಷ್ಕರದ ಸ್ಥಳಕ್ಕೆ ಭೇಟ್ಟಿ ನೀಡಿ, ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿ, ನಿಮ್ಮ ನ್ಯಾಯಯುತ ಬೇಡಿಕೆಯನ್ನು ಮುಖ್ಯಮಂತ್ರಿ, ಕಾನೂನು ಹಾಗೂ ಎಪಿಎಂಸಿ ಸಚಿವರೊಂದಿಗೆ ಮಾತುಕತೆ ನಡೆಸಿ, ತಮಗೆ ನ್ಯಾಯ ಒದಗಿಸಿ ಕೊಡುವ ಭರವಸೆ ನೀಡಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ಬಿಜೆಪಿ ಪಕ್ಷದವರು, ಕಾಂಗ್ರೆಸ್ ಪಕ್ಷದ ಶಾಸಕರಿಗೆ ತಲಾ 50 ಕೋಟಿ ರೂ ಆಮಿಷ ಒಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು, 50 ಕೋಟಿ ಅಲ್ಲಾ, 100 ಕೋಟಿ ಕೊಟ್ಟರೂ ನಮ್ಮ ಶಾಸಕರು ಯಾರು ಮಾರಾಟಕ್ಕಿಲ್ಲ ಎಂದ ಅವರು, ಮುಖ್ಯಮಂತ್ರಿಗಳು ಆ ರೀತಿ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷಿ ಇರಬಹುದು. ಅದಕ್ಕೆ ಅವರು ಆ ರೀತಿ ಹೇಳಿರಬಹುದು. ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಸ್ವಾಭಿಮಾನಿಗಳಾಗಿದ್ದಾರೆ. ಯಾರು ಮಾರಾಟಕ್ಕಿಟ್ಟಲ್ಲ ಎಂದು ಲಕ್ಷ್ಮಣ ಸವದಿ ಅಭಿಪ್ರಾಯಪಟ್ಟರು. ಬಿಜೆಪಿಯರು ಏನೇ ತಿಪ್ಪರಲಗಾ ಹಾಕಿದರು ಅವರ ಕನಸು ನನಸಾಗದು ಎಂದರು.