ಬೆಂಗಳೂರು,ಸೆ 22 ಉಪಚುನಾವಣೆ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಮೊದಲ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದೆ.
ಮಾಜಿ ಸಂಸದ ವಿಎಸ್ ಉಗ್ರಪ್ಪಹಾಗು ವಿಧಾನ ಪರಿಷತ್ ಸದಸ್ಯರು ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಉಪ ಮುಖ್ಯಮಂತ್ರಿ,ಸಚಿವರ ವಿರುದ್ಧ ದೂರು ನೀಡಿದ್ದಾರೆ.
ಸರ್ಕಾರದ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ ಕುರಿತು ಸಭೆ ನಡೆಸಿ ನೀತಿ ಸಂಹಿತರ ಉಲ್ಲಂಘನೆ ಕುರಿತು ದೂರು ಸಲ್ಲಿಸಿದ್ದೇವೆ. ವಿಧಾನಸೌಧದಲ್ಲಿ ಜೆ ಪಿ ನಡ್ಡಾ ಜೊತೆಗೆ ವೀಡಿಯೋ ಸಂವಾದ ನಡೆಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕ್ರಮ ಪ್ರಶ್ನಿಸಿ ದೂರು ಸಲ್ಲಿಸಿದ್ದೇವೆ. ಹೀಗಾಗಿ ಚುನಾವಣಾಧಿಕಾರಿಗೆ ನೀತಿ ಸಂಹಿತೆ ಉಲ್ಲಂಘನೆ ದೂರು ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ಸಿಕ್ಕಿದೆ ಎಂದರು.
ಉಪಚುನಾವಣೆ ಘೋಷಣೆ ಬಳಿಕ ಯಡಿಯೂರಪ್ಪ ನವರು ಮತ್ತು ಸಚಿವರು ಸರ್ಕಾರಿ ಕಚೇರಿಯಲ್ಲಿ ಮತ್ತು ಅರಣ್ಯ ಇಲಾಖೆ ಅತಿಥಿ ಗೃಹದಲ್ಲಿ ರಾಜಕೀಯ ಸಭೆ ನಡೆಸಿದ್ದಾರೆ. ಅನರ್ಹರ ಜೊತೆ ಅರಣ್ಯ ಇಲಾಖೆ ಅತಿಥಿ ಗೃಹದಲ್ಲಿ ಸಭೆ ನಡೆಸಿದ್ದಾರೆ. ಅಡ್ವೋಕೇಟ್ ಜನರಲ್ ಅವರನ್ನು ಕರೆದುಕೊಂಡು ಮಾತನಾಡಿದ್ದಾರೆ. ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಜೆ. ಪಿ. ನಡ್ಡಾ ಜೊತೆಗೆ ವೀಡಿಯೋ ಸಂವಾದ ನಡೆಸಿದ್ದಾರೆ. ಇದು ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆ ಯಾಗಲಿದೆ. ಯಡಿಯೂರಪ್ಪ ಮತ್ತು ಸಚಿವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ ಎಂದರು.
ವಿಧಾನಪರಿಷತ್ ಸದಸ್ಯ ಪ್ರಕಾಶ ರಾಥೋಡ್ ಮಾತನಾಡಿ, ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಅಲ್ಲಿಗೆ ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಬೃಹತ್ ಮೆರವಣಿಗೆ ಮೂಲಕ ಆಗಮಿಸಲಿದ್ದು ಎರಡು ಕಾರ್ಯಕ್ರಮಗಳಿಗೆ ಚುನಾವಣಾ ಆಯೋಗದ ಪರವಾನಗಿ ಕೇಳಿದ್ದು ಸಮ್ಮತಿ ಸಿಕ್ಕಿದೆ ಎಂದರು.