ಬೆಂಗಳೂರು, ಏ 10, ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಆಶಾಂತಿ, ಕೋಮು ಸಾಮರಸ್ಯ ಹಾಳಗೆಡವಲು ಕಾರಣರಾದ ಬಿಜೆಪಿ ನಾಯಕರಾದ ಶೋಭಾ ಕರಂದ್ಲಾಜೆ ಅನಂತ್ ಕುಮಾರ್ ಹೆಗಡೆ, ಶಾಸಕರಾದ ರೇಣುಕಾಚಾರ್ಯ ಹಾಗೂ ಯತ್ನಾಳ್ ವಿರುದ್ಧ ಕೂಡಲೆ ಸ್ವಯಂ ಪ್ರೇರೆಣೆಯಿಂದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ . ಸಮಾಜದಲ್ಲಿ ಅತ್ಯಂತ ಜವಾಬ್ದಾರಿ ವ್ಯಕ್ತಿಗಳಾಗಿ ಮೇಲಾಗಿ ಚುನಾಯಿತ ಪ್ರತಿನಿಧಿಗಳಾಗಿ ಪ್ರಮಾಣ ವಚನ ತೆಗೆದುಕೊಂಡು ಒಂದು ಸಮುದಾಯವನ್ನು ಗುರಿಯಾಸಿಕೊಂಡು ಆಶಾಂತಿ ಮೂಡಿಸಿ, ಪ್ರಚೋದನೆ ಹೇಳಿಕೆ ನೀಡಿದ ಈ ನಾಯಕರ ವಿರುದ್ದ ಕೂಡಲೆ ಕಾನೂನು ಕ್ರಮ ಜರುಗಿಸಬೇಕು ಎಂದೂ ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಮೂಲಕ ಬಿಜೆಪಿ ನಾಯಕರು ಸಮಾಜದಲ್ಲಿ ಜನರ ನಡುವೆ ಕೋಮು ಸಾಮರಸ್ಯ ಹಾಳು ಮಾಡಿ, ದ್ವೇಷ , ಅಸೂಯೆ , ಅಶಾಂತಿಗೆ ಕಾರಣವಾಗಿದ್ದಾರೆ ಇವರ ವಿರುದ್ದ ಕಾನೂನು ಕ್ರಮ ಅನಿವಾರ್ಯ ಎಂದೂ ದೂರಿನಲ್ಲಿ ಹೇಳಲಾಗಿದೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಉದ್ದೇಸಕ್ಕೆ ಬಳಸಿಕೊಂಡು ಟೀಕೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಲಾಗಿದೆ. ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ದ ಕ್ರಮ ಕೈಗೊಳ್ಳಬೆಕು ಎಂದು ಒತ್ತಾಯಿಸಿದೆ..ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಅವರನ್ನು ತಕ್ಷಣ ಬಂಧಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.. ನಿಯೋಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ಎಂಎಲ್ಸಿ ಎಂ.ಸಿ. ವೇಣುಗೋಪಾಲ್ ಹಾಜರಿದ್ದರು.