ಶಕ್ತಿ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಕೆ.ಶ್ರೀನಿವಾಸರಾವ್
Congress government has done as promised through Shakti Yojana: K. Srinivasa Rao
ಕಂಪ್ಲಿ:15 ಶಕ್ತಿ ಯೋಜನೆಯಿಂದ ನಾಡಿನ ಪ್ರತಿಯೊಬ್ಬ ಮಹಿಳೆಗೆ ಅನುಕೂಲವಾಗಿದೆ. ಇದರಿಂದ ಪ್ರವಾಸಿ ತಾಣ ಸೇರಿದಂತೆ ಇನ್ನಿತರ ಪ್ರದೇಶದ ಸೌದರ್ಯವನ್ನು ಕಣ್ತುಂಬಿಕೊಂಡಿದ್ದಾರೆ ಎಂದು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ಹೇಳಿದರು.
ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಣ ಸಂಭ್ರಮದ ಅಂಗವಾಗಿ ಕೆಎಸ್‌ಆರ್‌ಟಿಸಿ ಬಸ್‌ಗೆ ಪೂಜೆ ಸಲ್ಲಿಸಿ, ಹೂವಿನ ಅಲಂಕಾರ ಮಾಡಿ, ನಂತರ ಅಧಿಕಾರಿಗಳಿಗೆ ಸನ್ಮಾನಿಸಿ ಮತ್ತು ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಎಲ್ಲಾ ವರ್ಗದ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದು, ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಸರ್ಕಾರದ ಕಾರ್ಯಕ್ಕೆ ಎಲ್ಲಾ ಮಹಿಳೆಯರು ಹರ್ಷ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ನುಡಿದಂತೆ ನಡೆದಿದೆ. 500 ಕೋಟಿ ಮಹಿಳೆಯರು ಪ್ರಯಾಣ ಮಾಡಿ, ಶಕ್ತಿ ಯೋಜನೆಯ ಪ್ರಯೋಜನೆ ಪಡೆದಿದ್ದಾರೆ ಎಂದರು. ನಂತರ ಇಲ್ಲಿನ ಡಿಪೋ ಮ್ಯಾನೇಜರ್ ಚಂದ್ರಶೇಖರ್, ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ನಿಯಂತ್ರಣಾಧಿಕಾರಿಗಳಾದ ಆದಿಶೇಷ, ರೇವಣ್ಣಸಿದ್ದಪ್ಪ, ತಿಮ್ಮಪ್ಪ, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಘುನಾಯಕ, ಮುಖಂಡರಾದ ಪಿ.ಮೂಕಯ್ಯಸ್ವಾಮಿ, ಸೈಯದ್ ಉಸ್ಮಾನ್, ಕರೇಕಲ್ ಮನೋಹರ, ಬಿ.ಸಿದ್ದಪ್ಪ, ಗೌಡ್ರು ಅಂಜಿನಪ್ಪ, ಎಂ.ಸುಧೀರ್, ಆಟೋ ರಾಘು, ಧನಂಜಯ, ರಮೇಶ, ಶಿವುಕುಮಾರ, ರೇಣುಕಮ್ಮ ಸೇರಿದಂತೆ ಮಹಿಳೆಯರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಪಟ್ಟಣದ ಹೊಸ ಜು002ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಡಿಯಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಣ ಸಂಭ್ರಮದ ಅಂಗವಾಗಿ ಕೆಎಸ್‌ಆರ್‌ಟಿಸಿ ಬಸ್‌ಗೆ ಪೂಜೆ ಸಲ್ಲಿಸಿ, ಹೂವಿನ ಅಲಂಕಾರ ಮಾಡಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 