ಬಡವರ ಆರೋಗ್ಯ ಕಸಿದುಕೊಂಡ ಕಾಂಗ್ರೆಸ್ ಸರ್ಕಾರ : ಮ್ಯಾಗೇರಿ
Congress government has taken away the health of the poor: Mageri
ಶಿಗ್ಗಾವಿ 29 : ಬಡವರ ಪಾಲಿಗೆ ಜನ ಓಷಧಿ ಕೇಂದ್ರಗಳು ಕಡಿಮೆ ದರದಲ್ಲಿ ಕೈಗೆ ಎಟಕುವ ದರದಲ್ಲಿ ಅನಾರೋಗ್ಯವಂತ ಬಡವರಿಗೆ ಓಷಧಿಗಳು ಸಿಗುತ್ತಿರುವ ಸರಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನ ಓಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಮಾಡಿರುವ ಕಾಂಗ್ರೆಸ್ ಸರಕಾರ ಬಡವರ ಆರೋಗ್ಯ ಕಸಿದುಕೊಂಡಿದೆ ಎಂದು ಶಿಗ್ಗಾವಿ ನಿಕಟ ಪೂರ್ವ ಬಿಜೆಪಿ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು.
ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದಿಲ್ಲ ಒಂದು ಬಡವರು ಹಾಗೂ ಮಧ್ಯಮ ವರ್ಗದ ಜನರ ಹೊಟ್ಟೆ ಮೇಲೆ ಹೊಡೆಯುತ್ತಾ ಬಂದಿದೆ ದಿನನಿತ್ಯ ಬಳಕೆಯ ಹಾಲು ಡಿಜೇಲ ಸ್ಟಾಂಪು ಹಾಲ್ಕೋಹಾಲು ಬಸ್ ಚಾರ್ಜು ವಿದ್ಯುತ್ ದರ ತೆರಿಗೆ ಸೇರಿ ಹತ್ತು ಹಲವಾರು ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಸಿ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಆಡಳಿತ ಮಾಡುತ್ತಿದ್ದಾರೆ ವಸ್ತುಗಳ ಬೆಲೆ ಇಳಿಸಬೇಕು ಸರಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನ ಓಷಧಿ ಕೇಂದ್ರಗಳ ಬಂದ್ ಮಾಡುವ ಆದೇಶ ಹಿಂಪಡೆಯಬೇಕು ಬಡ ರೋಗಿಗಳ ಶಾಪದಿಂದ ವಿಮೋಚನೆ ಆಗಬೇಕೆಂದು ಕಾಂಗ್ರೆಸ್ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 