ಕಾಂಗ್ರೆಸ್ ಪಾಕಿಸ್ತಾನದಂತೆಯೇ ಹೇಳಿಕೆ ನೀಡುತ್ತಿದೆ; ಜೋಷಿ

ರಾಯಚೂರು, ಜ 12 :         ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಭರದಲ್ಲಿ ದೇಶದ ವಿರುದ್ಧವೂ ಕಾಂಗ್ರೆಸ್ ಮಾತನಾಡುತ್ತಿದೆ. ಪಾಕಿಸ್ತಾನ  ಮತ್ತು ಕಾಂಗ್ರೆಸ್ ಮುಖಂಡರ ಹೇಳಿಕೆಗಳು ಎರಡೂ ಒಂದೇ ರೀತಿಯಲ್ಲಿವೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದರು. 

ನಗರದಲ್ಲಿ ಬಿಜೆಪಿ ಭಾನುವಾರ ಆಯೋಜಿಸಿದ್ದ ಸಿಎಎ ಬೆಂಬಲಿಸಿ ಯರ್ಾಲಿಯಲ್ಲಿ ಪಾಲ್ಗೊಳ್ಳುವ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುವ ಅನ್ಯಾಯವನ್ನು ವಿಶ್ವಕ್ಕೆ ತೋರಿಸಲು ಈಗ ಸದವಕಾಶ ಲಭಿಸಿದೆ. ಇದನ್ನು ಕಾಂಗ್ರೆಸ್  ಅರಿತುಕೊಳ್ಳಬೇಕು ಎಂದರು. 

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆಗೊಳಿಸಿದ ಸಿ.ಡಿ. ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಹಿಟ್ ಅ್ಯಂಡ್ ರನ್ ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಹೊಸದೇನಲ್ಲ.  ಪೊಲೀಸರ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ. ಈ ಸಂಬಂಧ ಪೊಲೀಸ್ ಅಧಿಕಾರಿಗಳು ಆಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು.